ಸೆ.13ರಂದು ರಾಜ್ಯದ ಯಾವ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ಬೆಂಗಳೂರು, ಸೆಪ್ಟೆಂಬರ್ 13: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಸೆಪ್ಟೆಂಬರ್ 13ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ. ಭಾರತದಲ್ಲಿ ಕಳೆದ ಬುಧವಾರ ಹಾಗೂ ಭಾನುವಾರ (ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರು ನಿಂದ 106 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ ಸುಮಾರು 3ರು ಇಳಿಕೆಯಾಗಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.26 ರು ಪ್ರತಿ ಲೀಟರ್, ಡೀಸೆಲ್ 96.19ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರುಗೆ ತಗ್ಗಿದೆ
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.70ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.04ರೂಪಾಯಿಗೆ ಮುಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106 ಪ್ಲಸ್ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಮಿಕ್ಕಂತೆ ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಪ್ರತಿ ಲೀಟರ್‌ಗೆ 106 ಪ್ಲಸ್ ದರ ಇದೆ ಇತರೆ ಜಿಲ್ಲೆಗಳಲ್ಲಿ 104 ರಿಂದ 105ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 15-19ಪೈಸೆಯಷ್ಟು ಇಳಿಕೆಯಾಗಿತ್ತು, ಸೋಮವಾರದಂದು ಯಾವುದೇ ಬದಲಾವಣೆಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 93.63 ರು ಪ್ರತಿ ಲೀಟರ್‌ನಷ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರು ಆಸುಪಾಸಿನಲ್ಲಿದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 13ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 73.17 ಯುಎಸ್ ಡಾಲರ್(1 USD=73.61 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.53ರು ನಷ್ಟಿದೆ, ಡೀಸೆಲ್ ಬೆಲೆ 101.81ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಸೆಪ್ಟೆಂಬರ್ 13) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Commercial LPG: ಹೋಟೆಲ್, ಪಿಜಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: ವಾಣಿಜ್ಯ ಎಲ್ಪಿಜಿ ಹಂಚಿಕೆ ಪ್ರಮಾಣ ಹೆಚ್ಚಿಸಿ ಆದೇಶ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications