ಸೆ.23ರಂದು ಕರ್ನಾಟಕದ ಜಿಲ್ಲೆಗಳ ಪೆಟ್ರೋಲ್ ದರ ಎಷ್ಟಿದೆ?
ಬೆಂಗಳೂರು, ಸೆಪ್ಟೆಂಬರ್ 23: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಸೆಪ್ಟೆಂಬರ್ 22ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ. ಭಾರತದಲ್ಲಿ ಭಾನುವಾರ (ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರು ನಿಂದ 106 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ ಸುಮಾರು 3ರು ಇಳಿಕೆಯಾಗಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.26 ರು ಪ್ರತಿ ಲೀಟರ್, ಡೀಸೆಲ್ 96.19ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರುಗೆ ಏರಿಕೆ
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.70ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.04ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.93ಪ್ಲಸ್ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಮಿಕ್ಕಂತೆ ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಪ್ರತಿ ಲೀಟರ್‌ಗೆ 106 ಪ್ಲಸ್ ದರ ಇದೆ ಇತರೆ ಜಿಲ್ಲೆಗಳಲ್ಲಿ 104 ರಿಂದ 105ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 15-19ಪೈಸೆಯಷ್ಟು ಇಳಿಕೆಯಾಗಿತ್ತು, ಸೋಮವಾರದಂದು ಯಾವುದೇ ಬದಲಾವಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 93.26 ರು ಪ್ರತಿ ಲೀಟರ್‌ನಷ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರು ಆಸುಪಾಸಿನಲ್ಲಿದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 23ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 76.14ಯುಎಸ್ ಡಾಲರ್(1 USD=73.81ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.66ರು ನಷ್ಟಿದೆ, ಡೀಸೆಲ್ ಬೆಲೆ 101.92ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಸೆಪ್ಟೆಂಬರ್ 22) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications