Get Updates
Get notified of breaking news, exclusive insights, and must-see stories!

Petrol And Diesel Price Today: ಏ.4ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

ಬೆಂಗಳೂರು, ಏಪ್ರಿಲ್ 4: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಸೋಮವಾರ, ಏಪ್ರಿಲ್ 4) ಕೂಡ ಇಂಧನ ಏರಿಕೆ ಕಂಡಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಕಳೆದ 14 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ 8.50 ರೂ. ಹೆಚ್ಚಾಗಿದೆ. ನಿನ್ನೆಯೂ (ಭಾನುವಾರ) ಇಂಧನ ದರ ಹೆಚ್ಚಳವಾಗಿತ್ತು. ಇದೀಗ ಸೋಮವಾರವಾದ ಇಂದು(ಏಪ್ರಿಲ್ 4) ಸಹ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 40 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 40 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 103.81 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 40 ಪೈಸೆ ಹೆಚ್ಚಳದ ಮೂಲಕ 95.07 ರೂ. ದಾಖಲಾಗಿದೆ.

Petrol And Diesel Prices Changed on 4th April 2022 In Karnataka: Check Rate in Your City


ರಾಜ್ಯದ ಕೆಲವು ನಗರಗಳಲ್ಲಿ ಏರಿಕೆ ಕಂಡು ಬಂದಿದ್ದು, ಇಂದು ಚಿತ್ರದುರ್ಗದಲ್ಲಿ ಪೆಟ್ರೋಲ್‌ ಬೆಲೆ 111.39 ರೂಪಾಯಿ ಆಗಿದೆ. ನಿನ್ನೆ ಚಿತ್ರದುರ್ಗದಲ್ಲಿ ಪೆಟ್ರೋಲ್‌ ಬೆಲೆ 110.24 ರೂ. ಆಗಿತ್ತು. ಇನ್ನು ದಾವಣಗೆರೆಯಲ್ಲಿ ಪೆಟ್ರೋಲ್‌ ದರ 110.89 ಆಗಿದೆ. ನಿನ್ನೆ ದಾವಣಗೆರೆಯಲ್ಲಿ ಪೆಟ್ರೋಲ್‌ ದರ 110.95 ರೂ. ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

Petrol And Diesel Prices Changed on 4th April 2022 In Karnataka: Check Rate in Your City

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್‌ ಬೆಲೆಯು 109.41 ರೂಪಾಯಿ ಆಗಿದೆ. ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಪೆಟ್ರೋಲ್‌ ಬೆಲೆ ಅತ್ಯಧಿಕ ಇದೆ. ಚಿಕ್ಕಮಗಳೂರಿನಲ್ಲಿ 110.53 ರೂ. ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದರೆ, ಯಾದಗಿರಿಯಲ್ಲಿ 110.21 ಇದ್ದು, ಉಳಿದಂತೆ ಇತರೆ ಜಿಲ್ಲೆಗಳಲ್ಲಿ 109 ರಿಂದ 110 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol And Diesel Prices Changed on 4th April 2022 In Karnataka: Check Rate in Your City


ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ. ಆಗಿತ್ತು. ಆದರೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 93.23 ರೂ. ಆಗಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ 94 ರೂ.ಗಿಂತ ಹೆಚ್ಚಿದೆ. ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 94.48 ರೂ. ಪ್ರತಿ ಲೀಟರ್‌ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪ್ರತಿ ಲೀಟರ್‌ ಡೀಸೆಲ್ ಬೆಲೆ 93.84 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 91 ರಿಂದ 93 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್​ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 104.6 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+