Infographics: ಏ.2ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಬೆಂಗಳೂರು, ಏಪ್ರಿಲ್ 2: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಏಪ್ರಿಲ್ 2) ಕೂಡ ಇಂಧನ ಏರಿಕೆ ಕಂಡಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಕಳೆದ 12 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ 7.20 ರೂ. ಹೆಚ್ಚಾಗಿದೆ. ನಿನ್ನೆ (ಶುಕ್ರವಾರ) ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಇದೀಗ ಶನಿವಾರವಾದಂದು(ಏಪ್ರಿಲ್ 2) ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರಿ ಏರಿಕೆ ಕಂಡಿದೆ. ಪ್ರಮುಖವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ಅಂದರೆ 137 ದಿನಗಳ ಬಳಿಕ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು.

Petrol And Diesel Prices Hiked on 2nd April 2022 In Karnataka: Check Rate in Your City

ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಮಾ‌ರ್ಚ್ 31ರಂದು ಪೆಟ್ರೋಲ್, ಡೀಸೆಲ್‌ಗೆ ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿತ್ತು. ಏಪ್ರಿಲ್ 2 ರಂದು ಪ್ರಮುಖ ಮೆಟ್ರೋನಗರಗಳಲ್ಲಿ ಬೆಲೆ ಏರಿಕೆಯಾಗಿದೆ.

ಅದರಂತೆ ರಾಜ್ಯದ ಕೆಲವು ನಗರಗಳಲ್ಲಿ ಇಂದನ ದರ ಏರಿಕೆ ಕಂಡು ಬಂದಿದೆ. ಇಂದು ಚಿಕ್ಕಮಗಳೂರಿನಲ್ಲಿ ಪೆಟ್ರೋಲ್‌ ಬೆಲೆ 109.05 ರೂಪಾಯಿ ಆಗಿದೆ. ನಿನ್ನೆ ಚಿಕ್ಕಮಗಳೂರಿನಲ್ಲಿ ಪೆಟ್ರೋಲ್‌ ಬೆಲೆ 109.63 ರೂ. ಆಗಿತ್ತು. ಇನ್ನು ಉತ್ತರ ಕನ್ನಡದಲ್ಲಿ ಪೆಟ್ರೋಲ್‌ ದರ 109 ಆಗಿದೆ. ನಿನ್ನೆ ಉತ್ತರ ಕನ್ನಡದಲ್ಲಿ ಪೆಟ್ರೋಲ್‌ ದರ 109.15 ರೂ. ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

Petrol And Diesel Prices Hiked on 2nd April 2022 In Karnataka: Check Rate in Your City

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆ 108.14 ರೂ. ಆಗಿದೆ. ಬಳ್ಳಾರಿ, ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ಬಳ್ಳಾರಿಯಲ್ಲಿ 109.91 ರೂ. ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 107 ರಿಂದ 109 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol And Diesel Prices Hiked on 2nd April 2022 In Karnataka: Check Rate in Your City


ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ. ಆಗಿತ್ತು. ಆದರೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 92.05 ರೂ. ಆಗಿದೆ. ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ 93 ರೂ.ಗಿಂತ ಹೆಚ್ಚಿದೆ. ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 92.32 ರೂ. ಪ್ರತಿ ಲೀಟರ್‌ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿ ಲೀಟರ್‌ ಡೀಸೆಲ್ ಬೆಲೆ 93.05 ರೂಪಾಯಿ ಆಗಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 91 ರಿಂದ 92 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್​ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 104.4 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

Recommended Video

      ಮೋದಿ ಹತ್ಯೆಗೆ ಪ್ಲ್ಯಾನ್: ಭದ್ರತಾ ಪಡೆಗೆ ಕಳುಹಿಸಿದ ಈ- ಮೇಲ್ ನಲ್ಲಿ ಶಾಕಿಂಗ್ ಮಾಹಿತಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+