ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಅ.14ರಂದು ಎಲ್ಲೆಡೆ ಪೆಟ್ರೋಲ್, ಡೀಸೆಲ್ ದುಬಾರಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಅಕ್ಟೋಬರ್ 14ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಅ.11 ರಂದು ಪೆಟ್ರೋಲ್ ಬೆಲೆ 30 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ 35 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿತ್ತು. ಭಾರತದಲ್ಲಿ ಕಳೆದ 17 ದಿನಗಳಲ್ಲಿ 15 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸತತ 7 ದಿನಗಳಿಂದ ಇಂಧನ ದರ ಏರಿಕೆಯಾಗಿತ್ತು, ನಂತರ ಸತತವಾಗಿ ಬೆಲೆ ಸ್ಥಿರವಾಗಿತ್ತು. ಅ.14ರಂದು ಮತ್ತೊಮ್ಮೆ ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35-38 ಪೈಸೆಯಷ್ಟು ಪ್ರತಿ ಲೀಟರ್ ಮೇಲೆ ಏರಿಕೆಯಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 107 ರು ನಿಂದ 110 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ ಸುಮಾರು 3ರು ಇಳಿಕೆಯಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 47 ಬಾರಿ ಹಾಗೂ ಡೀಸೆಲ್ 42 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 11.25 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಅ.14: ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್; ಇಂಧನ ದರ ಹೆಚ್ಚಳ!ಅ.14: ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್; ಇಂಧನ ದರ ಹೆಚ್ಚಳ!

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 110.75ರು ಪ್ರತಿ ಲೀಟರ್, ಡೀಸೆಲ್ 101.40 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

 ಪೆಟ್ರೋಲ್ ಪ್ರತಿ ಲೀಟರ್‌ಗೆ 110ರುಗೆ ಏರಿಕೆ

ಪೆಟ್ರೋಲ್ ಪ್ರತಿ ಲೀಟರ್‌ಗೆ 110ರುಗೆ ಏರಿಕೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.44 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 99.26 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 110.33 ರು ಪ್ಲಸ್ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಮಿಕ್ಕಂತೆ ಚಿತ್ರದುರ್ಗ, ಬಾಗಲಕೋಟೆ, ಬೀದರ್, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ,ತುಮಕೂರು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಪ್ರತಿ ಲೀಟರ್‌ಗೆ 109 ರು ಪ್ಲಸ್ ದರ ಇದೆ ಇತರೆ ಜಿಲ್ಲೆಗಳಲ್ಲಿ 107 ರಿಂದ 110ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

 ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗುತ್ತಿದೆ. ಸೋಮವಾರದಂದು 35 ಪೈಸೆ ಏರಿಕೆಯಾಗಿದ್ದು, ನಂತರ ಗುರುವಾರವೂ ಇದೇ ಪ್ರಮಾಣದಲ್ಲಿ ಏರಿದೆ, ಬೆಂಗಳೂರಲ್ಲಿ 99.26ರು ಪ್ರತಿ ಲೀಟರ್ ನಷ್ಟಿದೆ. ಬಳ್ಳಾರಿ, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ಕೊಪ್ಪಳ, ತುಮಕೂರು, ಉತ್ತರ ಕನ್ನಡ ಅತ್ಯಧಿಕ 100 ರು ಪ್ಲಸ್ ಇದ್ದರೆ, ಕೋಲಾರ ಜಿಲ್ಲೆಯಲ್ಲಿ ಕನಿಷ್ಠ 98.97ರು ಪ್ರತಿ ಲೀಟರ್‌ನಷ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 98 ರಿಂದ 100 ರು ಆಸುಪಾಸಿನಲ್ಲಿದೆ.

 ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 14ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 84.15ಯುಎಸ್ ಡಾಲರ್(1 USD=75.28 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 116. 62ರು ನಷ್ಟಿದೆ, ಡೀಸೆಲ್ ಬೆಲೆ 107.40 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

 ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 14) ಮಾಹಿತಿ ಇಲ್ಲಿದೆ

English summary
Petrol and Diesel rate hiked on October 14 across Karnataka. A litre of petrol now costs Rs 108.08, Diesel at Rs 99.26 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X