ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜನವರಿ 15ರಂದು ಯಾವ ಜಿಲ್ಲೆಯಲ್ಲಿ ಇಂಧನ ದರ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಜನವರಿ 15: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜನವರಿ 15ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಜನವರಿ 15, ಶನಿವಾರ) ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಸತತ ಎರಡು ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬುಧವಾರಕ್ಕೆ ಹೋಲಿಸಿದರೆ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ವ್ಯತ್ಯಾಸ ಕಂಡು ಬಂದಿದೆ. ಇಂದು ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.43ರೂ, ಡೀಸೆಲ್ ಗರಿಷ್ಠ 86.55 ರೂಪಾಯಿ ದಾಖಲಾಗಿದೆ.

ಜ.15: ಕಚ್ಚಾ ತೈಲ ಬೆಲೆ ಏರಿಳಿತವಾದರೂ ಸ್ಥಿರತೆ ಕಾಯ್ದುಕೊಂಡ ಇಂಧನ ದರಜ.15: ಕಚ್ಚಾ ತೈಲ ಬೆಲೆ ಏರಿಳಿತವಾದರೂ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ಭಾರತ ಸರ್ಕಾರ ಮೂಲ ಬೆಲೆಯ ಶೇ.125ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ನವೆಂಬರ್ 5ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.

Petrol and Diesel rate Variation on January 15th across Karnataka

ಕರ್ನಾಟಕದಲ್ಲಿ ಪೆಟ್ರೋಲ್ ದರ ಏರಿಕೆ

ಕರ್ನಾಟಕದಲ್ಲಿ ಪೆಟ್ರೋಲ್ ದರ ಏರಿಕೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.74 ರೂಪಾಯಿಗೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತ್ಯಧಿಕ 102.43 ರೂ ಪ್ರತಿ ಲೀಟರ್ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 99 ರಿಂದ 101ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಇದೆ. ದಾವಣಗೆರೆ ಜಿಲ್ಲೆಯಲ್ಲಿ 86.55ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು.

English summary
Infographics: Petrol and Diesel rates Variation on January 15, 2022 across Karnataka. A litre of petrol now costs Rs 100.74, Diesel at Rs 85.01 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X