Infographics: ಜನವರಿ 17ರಂದು ಯಾವ ಜಿಲ್ಲೆಯಲ್ಲಿ ಎಷ್ಟಿದೆ ಇಂಧನ ದರ?

ಬೆಂಗಳೂರು, ಜನವರಿ 17: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜನವರಿ 17ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಜನವರಿ 17, ಸೋಮವಾರ) ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸತತ ಎರಡು ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ವ್ಯತ್ಯಾಸ ಕಂಡು ಬಂದಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.99ರೂ, ಡೀಸೆಲ್ ಗರಿಷ್ಠ 87.09 ರೂಪಾಯಿ ದಾಖಲಾಗಿದೆ.

ಭಾರತ ಸರ್ಕಾರ ಮೂಲ ಬೆಲೆಯ ಶೇ.125ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ನವೆಂಬರ್ 5ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಸ್ಥಿರವಾಗಿವೆ.

ಕರ್ನಾಟಕದಲ್ಲಿ ಪೆಟ್ರೋಲ್ ದರ

ಕರ್ನಾಟಕದಲ್ಲಿ ಪೆಟ್ರೋಲ್ ದರ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಗೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತ್ಯಧಿಕ 102.99 ರೂ ಪ್ರತಿ ಲೀಟರ್ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ ಬಳ್ಳಾರಿ ಮತ್ತು ದಕ್ಷಿಣ ಕನ್ನಡದಲ್ಲೂ ಪೆಟ್ರೋಲ್ ದರ 102 ರೂಪಾಯಿಗಿಂತ ಹೆಚ್ಚಾಗಿದೆ. ಇದರ ಹೊತರಾಗಿ ಇತರೆ ಜಿಲ್ಲೆಗಳಲ್ಲಿ 99 ರಿಂದ 101ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಇದೆ. ದಾವಣಗೆರೆ ಜಿಲ್ಲೆಯಲ್ಲಿ 87.09ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಳ್ಳಾರಿ, ದಾವಣಗೆರೆ, ಕೊಡಗು, ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ.

ಬೆಳಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಬೆಳಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+