ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ರಾಜ್ಯದಲ್ಲೇ ದುಬಾರಿ!
ಬೆಂಗಳೂರು, ಅಕ್ಟೋಬರ್ 21: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಅಕ್ಟೋಬರ್ 21ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿವೆ. ಅ. 21 ರಂದು ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿದೆ.ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್ 35 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 107 ರು ನಿಂದ 110 ರು ಗರಿಷ್ಠ ಇದೆ. ಪೆಟ್ರೋಲ್ ಗರಿಷ್ಠ ಉತ್ತರ ಕನ್ನಡದಲ್ಲಿ 112.48 ರು, ಡೀಸೆಲ್ ಕನಿಷ್ಠ 100. 33 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 52 ಬಾರಿ ಹಾಗೂ ಡೀಸೆಲ್ 47 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 11.25 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 112.44 ರು ಪ್ರತಿ ಲೀಟರ್, ಡೀಸೆಲ್ 103.26 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 111ರುಗೆ ಏರಿಕೆ
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 110.25 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 101.12 ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 112.48 ರು ಇದ್ದು, ರಾಜ್ಯದಲ್ಲೇ ಅತ್ಯಧಿಕ ಎನಿಸಿಕೊಂಡಿದೆ. ಉಳಿದಂತೆ, ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ,ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ 111 ರು ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 109 ರಿಂದ 110ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗುತ್ತಿದೆ. ಕಳೆದ ಶುಕ್ರವಾರದಂದು 35 ಪೈಸೆ ಏರಿಕೆಯಾಗಿದ್ದು, ನಂತರ ಭಾನುವಾರವೂ ಇದೇ ಪ್ರಮಾಣದಲ್ಲಿ ಏರಿದೆ, ನಂತರ 2 ದಿನದಿಂದ ಬೆಲೆ ಏರಿಕೆಯಾಗಿರಲಿಲ್ಲ. ಈಗ ಮತ್ತೆ ಏರಿಕೆ ಹಾದಿ ಹಿಡಿದಿದೆ. ಬೆಂಗಳೂರಲ್ಲಿ 101.12ರು ಪ್ರತಿ ಲೀಟರ್ ನಷ್ಟಿದೆ. ಉತ್ತರ ಕನ್ನಡದಲ್ಲಿ 103.07 ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಚಿತ್ರದುರ್ಗ 102.80, ಬಳ್ಳಾರಿ, ಶಿವಮೊಗ್ಗ, ದಾವಣಗೆರೆಯಲ್ಲಿ 102 ರು ಪ್ಲಸ್ ದರ ಇದ್ದರೆ,
ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಅತ್ಯಧಿಕ 101 ರು ಪ್ಲಸ್ ದರ ಇದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 19ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 83.64ಯುಎಸ್ ಡಾಲರ್ (1 USD=74.78ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 117.98 ರು ನಷ್ಟಿದೆ, ಡೀಸೆಲ್ ಬೆಲೆ 108.05 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 21) ಮಾಹಿತಿ ಇಲ್ಲಿದೆ












Click it and Unblock the Notifications