• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅ. 22 ರಾಜ್ಯದ ಯಾವ ಪಟ್ಟಣದಲ್ಲಿ ಪೆಟ್ರೋಲ್ ಬೆಲೆ ದುಬಾರಿ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಅಕ್ಟೋಬರ್ 21ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿವೆ. ಅ. 22 ರಂದು ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿದೆ. ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್ 35 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ನಂತರ ಸತತವಾಗಿ ಇಂಧನ ದರ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 107 ರು ನಿಂದ 110 ರು ಗರಿಷ್ಠ ಇದೆ. ಪೆಟ್ರೋಲ್ ಗರಿಷ್ಠ ಬಳ್ಳಾರಿಯಲ್ಲಿ 112.64 ರು, ಡೀಸೆಲ್ ಕನಿಷ್ಠ 100. 83 ರು ಉಡುಪಿ ಜಿಲ್ಲೆಯಲ್ಲಿ ದಾಖಲಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 53 ಬಾರಿ ಹಾಗೂ ಡೀಸೆಲ್ 48 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 11.25 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 112.78 ರು ಪ್ರತಿ ಲೀಟರ್, ಡೀಸೆಲ್ 103.63 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 111ರುಗೆ ಏರಿಕೆ

ಪೆಟ್ರೋಲ್ ಪ್ರತಿ ಲೀಟರ್‌ಗೆ 111ರುಗೆ ಏರಿಕೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 110.61ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 101.49 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 112.64 ರು ಇದ್ದು, ರಾಜ್ಯದಲ್ಲೇ ಅತ್ಯಧಿಕ ಎನಿಸಿಕೊಂಡಿದೆ. ಉಳಿದಂತೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲೂ 112 ರು ಪ್ಲಸ್ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಮಗಳೂರು, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ಕೊಡಗು, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ 111 ರು ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 109 ರಿಂದ 110ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ

ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗುತ್ತಿದೆ. ಕಳೆದ ಶುಕ್ರವಾರದಂದು 35 ಪೈಸೆ ಏರಿಕೆಯಾಗಿದ್ದು, ನಂತರ ಭಾನುವಾರವೂ ಇದೇ ಪ್ರಮಾಣದಲ್ಲಿ ಏರಿದೆ, ನಂತರ 2 ದಿನದಿಂದ ಬೆಲೆ ಏರಿಕೆಯಾಗಿರಲಿಲ್ಲ. ಈಗ ಮತ್ತೆ ಏರಿಕೆ ಹಾದಿ ಹಿಡಿದಿದೆ. ಬೆಂಗಳೂರಲ್ಲಿ 101.49ರು ಪ್ರತಿ ಲೀಟರ್ ನಷ್ಟಿದೆ. ಬಳ್ಳಾರಿ 103.36 ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಾಗಲ ಕೋಟೆ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಕೊಡಗು, ರಾಯಚೂರು, ಶಿವಮೊಗ್ಗ, ಯಾದಗಿರಿಯಲ್ಲಿ 102 ರು ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 101 ರು ಪ್ಲಸ್ ದರ ಇದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 19ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 84.90 ಯುಎಸ್ ಡಾಲರ್ (1 USD=75.04 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 118.54 ರು ನಷ್ಟಿದೆ, ಡೀಸೆಲ್ ಬೆಲೆ 109.41 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 22) ಮಾಹಿತಿ ಇಲ್ಲಿದೆ

English summary
Petrol and Diesel rates hiked on October 22 across Karnataka. A litre of petrol now costs Rs 110.61, Diesel at Rs 101.49 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X