ಅ. 29: ರಾಜ್ಯದ ಯಾವ ಪಟ್ಟಣದಲ್ಲಿ ಇಂಧನ ದುಬಾರಿ?
ಬೆಂಗಳೂರು, ಅಕ್ಟೋಬರ್ 29: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಅಕ್ಟೋಬರ್ 29ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿವೆ. ಶುಕ್ರವಾರದಂದು ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿದೆ. ಸತತವಾಗಿ ಮೂರು ದಿನಗಳಿಂದ ಇಂಧನ ದರ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 112ರು ನಿಂದ 115 ರು ಗರಿಷ್ಠ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 115.05ರು, ಡೀಸೆಲ್ ಗರಿಷ್ಠ 105.62 ರು ದಾಖಲಾಗಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 58 ಬಾರಿ ಹಾಗೂ ಡೀಸೆಲ್ 53 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 12.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 12.25 ರು ಪ್ರತಿ ಲೀಟರ್ ಏರಿಕೆ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 114.47 ರು ಪ್ರತಿ ಲೀಟರ್, ಡೀಸೆಲ್ 105.49 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 114 ರುಗೆ ಏರಿಕೆ
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 112.43ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 103.35 ರೂಪಾಯಿಗೆ ಮುಟ್ಟಿದೆ. ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆ 115.05 ರು ಇದ್ದು, ರಾಜ್ಯದಲ್ಲೇ ಅತ್ಯಧಿಕ ಎನಿಸಿಕೊಂಡಿದೆ. ಉಳಿದಂತೆ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಯಲ್ಲಿ114 ರು ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 112 ರಿಂದ 113ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗುತ್ತಿದೆ. ಮುರ್ನಾಲ್ಕು ದಿನಗಳಿಂದ ಇದೇ ಪ್ರಮಾಣದಲ್ಲಿ ಮತ್ತೆ ಏರಿಕೆ ಹಾದಿ ಹಿಡಿದಿದೆ. ಬೆಂಗಳೂರಲ್ಲಿ 103.35 ರು ಪ್ರತಿ ಲೀಟರ್ ನಷ್ಟಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 105.62 ರು ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಶಿವಮೊಗ್ಗ, ಕೊಪ್ಪಳ, ಕೊಡಗು, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ 104 ರು ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 102 ರು ನಿಂದ 103 ರು ಪ್ಲಸ್ ದರ ಇದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 29ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 84.36 ಯುಎಸ್ ಡಾಲರ್ (1 USD=74.96 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 120.37 ರು ನಷ್ಟಿದೆ, ಡೀಸೆಲ್ ಬೆಲೆ 111.30 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 29) ಮಾಹಿತಿ ಇಲ್ಲಿದೆ












Click it and Unblock the Notifications