ಜೂನ್ 5ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಪೆಟ್ರೋಲ್ ಬೆಲೆ?

ಬೆಂಗಳೂರು, ಜೂನ್ 05: ಶುಕ್ರವಾರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಶನಿವಾರ, ಜೂನ್ 5ರಂದು ದೇಶದ ಪ್ರಮುಖ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ಜೂನ್ 4ರಂದು 18ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿತ್ತು. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ಪ್ರತಿ ಲೀಟರ್‌ಗೆ 100.98 ರೂ, ಡೀಸೆಲ್‌ಗೆ 92.99 ರೂಪಾಯಿಯಷ್ಟಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರೂಪಾಯಿ ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರೂ ಹಾಗೂ ಡೀಸೆಲ್ 4.47 ರೂ ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 70 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್ ಮೇಲೆ 13 ರೂ, ಡೀಸೆಲ್ ಮೇಲೆ 16 ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರೂ ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ, 105.33 ರೂ ನಷ್ಟಿದೆ, ಡೀಸೆಲ್ ಬೆಲೆ 98.20 ರೂ ಆಗಿದೆ.

Petrol And Diesel Rates Stable On June 5 Across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 97.92 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 90.81ರೂಪಾಯಿಗೆ ಮುಟ್ಟಿದೆ.

Petrol And Diesel Rates Stable On June 5 Across Karnataka

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 05ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..
(ವಿನ್ಯಾಸ: ಭರತ್ ಎಚ್.ಸಿ)

Recommended Video

      England Pitch ಭಾರತಕ್ಕಿಂತ ನ್ಯೂಜಿಲೆಂಡ್ ಗೆ ಹೆಚ್ಚು ಸಹಕಾರಿಯಾಗುತ್ತಾ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+