ಡಿ.7ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಬೆಂಗಳೂರು, ಡಿಸೆಂಬರ್ 07: ಕರ್ನಾಟಕದಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸ್ಥಿರವಾಗಿದೆ. ಸೋಮವಾರದಂತೆ ಮಂಗಳವಾರ ಕೂಡ ಬೆಣ್ಣೆನಗರಿ ದಾವಣಗೆರೆಯಲ್ಲಿ ಪೆಟ್ರೋಲ್ ದರ ಹೆಚ್ಚಾಗಿದ್ದು, ಪ್ರತಿ ಲೀಟರ್‌ಗೆ 102.60 ರೂ. ಇದೆ.
ದಾವಣಗೆರೆ ಹೊರತಾಗಿ ಬಳ್ಳಾರಿಯಲ್ಲಿ 101.80 ರೂ. ಕೊಪ್ಪಳದಲ್ಲಿ 101.66 ರೂ, ಕಲಬುರಗಿ 101.09 ರೂ., ಚಿತ್ರದುರ್ಗದಲ್ಲಿ 101.86 ರೂ., ಬೀದರ್‌ನಲ್ಲಿ 101.04 ರೂ ಉತ್ತರ ಕನ್ನಡದಲ್ಲಿ 101.48 ರೂ, ಶಿವಮೊಗ್ಗದಲ್ಲಿ 102.14 ರೂ. ದಾಖಲಾಗಿದೆ. ಇನ್ನು ಡೀಸೆಲ್ ಬೆಲೆಯು ದಾವಣಗೆರೆಯಲ್ಲಿ 86.71 ರೂ, ಚಿತ್ರದುರ್ಗದಲ್ಲಿ 86.04 ರೂ, ಕೊಡಗಿನಲ್ಲಿ 86.05 ರೂ ಇದೆ. ಕೊಪ್ಪಳದಲ್ಲಿ 86.01, ಚಿಕ್ಕಮಗಳೂರಿನಲ್ಲಿ 86.48 ರೂ. ಇದೆ.
ದೆಹಲಿ ಹೊರತುಪಡಿಸಿ ದೇಶದ ಬೇರೆ ಯಾವುದೇ ನಗರಗಳಲ್ಲೂ ಪೆಟ್ರೋಲ್‌ಗೂ ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಅದಾಗ್ಯೂ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಇಳಿಕೆಯಾಗಬಹುದು, ನಾಳೆ ಇಳಿಕೆಯಾಗಬಹುದು ಎಂದು ಜನರು ಎದುರು ನೋಡುವುದೇ ಆಗಿದೆ. ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಇಂಧನ ದರದ ಮೇಲಿನ ತೆರಿಗೆಗಳನ್ನು ಕಡಿತಗೊಳಿಸಿದರೆ ಮಾತ್ರ ಬೆಲೆಯಲ್ಲಿ ಇಳಿಕೆ ಕಾಣಲು ಸಾಧ್ಯವಾಗಿದೆ. ಕಳೆದ ಕೆಲವು ತಿಂಗಳಿಂದ ಬೆಲೆಯೇರಿಕೆ ಬಿಸಿ ಜನಸಾಮಾನ್ಯರ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಎಲ್ ಪಿಜಿ ಸಿಲಿಂಡರ್ ದರ ಏರಿಕೆ:
ಎಲ್ಪಿಜಿ ಸಿಲಿಂಡರ್ ದರ ಕೂಡ ಗಗನಕ್ಕೇರಿದ್ದು, ಗೃಹಿಣಿಯರ ನೆಮ್ಮದಿ ಕೆಡಿಸಿದೆ. ಈ ಮಧ್ಯೆ ಕಳೆದ ಒಂದು ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿರೋದು ವಾಹನ ಸವಾರರಿಗೆ ಸ್ವಲ್ಪ ಮಟ್ಟಿಗಿನ ನೆಮ್ಮದಿ ತಂದಿದೆ. ಆದ್ರೂ ಇಂಧನ ದರದಲ್ಲಿ ಆದಷ್ಟು ಬೇಗ ಇಳಿಕೆಯಾಗಲಿ ಎಂಬ ನಿರೀಕ್ಷೆ ಮಾತ್ರ ಹಾಗೇ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.6) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ?
ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದ್ದು, ಕಳೆದ 13 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಪೆಟ್ರೋಲ್ ಹಾಗೂ ಡೀಸೆಲ್ ಎರಡರ ಬೆಲೆಯಲ್ಲೂ ನಿನ್ನೆಗಿಂತ 0.09 ರೂ. ಕಡಿಮೆಯಾಗಿದ್ದು, ಕಳೆದ ಕೆಲವು ದಿನಗಳಿಂದ 0.09 ರೂ. ಏರಿಳಿತದ ಆಟ ಮುಂದುವರಿದಿದೆ. ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 99.97 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100.51ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 84.95ರೂ. ಇದೆ. ಕಲಬುರಗಿಯಲ್ಲಿ ಪೆಟ್ರೋಲ್ 101.09ರೂ. ಹಾಗೂ ಡೀಸೆಲ್ ಗೆ 85.50ರೂ ಇದೆ.

ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿ ಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಇಂಧನ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಧಿಸುವ ತೆರಿಗೆಗಳೇ ಮುಖ್ಯ ಕಾರಣವಾಗಿರುತ್ತದೆ. ಇಂಧನಗಳ ಮೇಲೆ ವಿಧಿಸುವ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ.
ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕುತ್ತದೆ. ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳು ಏರಿಳಿತ ಆಗುತ್ತಿರುವ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು.
ಆದರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.












Click it and Unblock the Notifications