Infographics: ಡಿಸೆಂಬರ್ 28ರಂದು ಕರ್ನಾಟಕದಲ್ಲಿ ಇಂಧನ ಬೆಲೆ ಎಲ್ಲಿ ಅಧಿಕ?

ಬೆಂಗಳೂರು, ಡಿಸೆಂಬರ್ 28: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮಂಗಳವಾರ(ಡಿಸೆಂಬರ್ 28) ದಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಬಹುತೇಕ ಒಂದೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇಂದು ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.75 ರು, ಡೀಸೆಲ್ ಗರಿಷ್ಠ 86.84ರು ದಾಖಲಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ನವೆಂಬರ್ 5ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 109.98 ರು ಪ್ರತಿ ಲೀಟರ್, ಡೀಸೆಲ್ 94.14 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 102 ರುಗೆ ಏರಿಕೆ

ಪೆಟ್ರೋಲ್ ಪ್ರತಿ ಲೀಟರ್‌ಗೆ 102 ರುಗೆ ಏರಿಕೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ಮುಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಅತ್ಯಧಿಕ 102.75 ರು ಪ್ರತಿ ಲೀಟರ್ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯಲ್ಲಿ 102 ರು ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 99 ರಿಂದ 101ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಅಧಿಕ ಇರುವ ಜಿಲ್ಲೆ

ಡೀಸೆಲ್ ಬೆಲೆ ಅಧಿಕ ಇರುವ ಜಿಲ್ಲೆ

ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ 85.01ರು ಪ್ರತಿ ಲೀಟರ್ ನಷ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ 86.84 ರು ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ತುಮಕೂರು, ಶಿವಮೊಗ್ಗ, ಕೊಪ್ಪಳ, ಕೊಡಗು, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಲ್ಲಿ 86 ರು ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರು ನಿಂದ 85 ರು ಪ್ಲಸ್ ದರ ಇದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಸೆಂಬರ್ 28ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 79.58 ಯುಎಸ್ ಡಾಲರ್ (1 USD=74.71 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.11ರು ನಷ್ಟಿದೆ, ಡೀಸೆಲ್ ಬೆಲೆ 95.26ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 111 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಡಿಸೆಂಬರ್ 28) ಮಾಹಿತಿ ಇಲ್ಲಿದೆ (https://kannada.goodreturns.in/petrol-price-in-karnataka-s17.html)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+