Infographics; ನ.20ರಂದು ಕರ್ನಾಟಕದ ವಿವಿಧ ನಗರಗಳಲ್ಲಿ ಇಂಧನ ಎಷ್ಟಿದೆ?

ಬೆಂಗಳೂರು, ನವೆಂಬರ್ 20: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ನವೆಂಬರ್ 20ರಂದು ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಿಸಿಲ್ಲ. ಕಳೆದ ಹದಿನಾರು ದಿನಗಳ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 99 ರೂ. ನಿಂದ 102 ರೂ. ಗರಿಷ್ಠ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.25 ರೂ., ಡೀಸೆಲ್ ಗರಿಷ್ಠ 86.39 ರೂ. ದಾಖಲಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ. ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 109.98 ರು ಪ್ರತಿ ಲೀಟರ್, ಡೀಸೆಲ್ 94.14 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ನವೆಂಬರ್ 20) ಇಲ್ಲಿದೆ.

 ರಾಜ್ಯದಲ್ಲಿ ಪೆಟ್ರೋಲ್ ದರ ಇಲ್ಲಿದೆ

ರಾಜ್ಯದಲ್ಲಿ ಪೆಟ್ರೋಲ್ ದರ ಇಲ್ಲಿದೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ಮುಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.25 ರು, ರಾಜ್ಯದಲ್ಲೇ ಅತ್ಯಧಿಕ ಎನಿಸಿಕೊಂಡಿದೆ. ಉಳಿದಂತೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ 102 ರು ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 99 ರಿಂದ 101ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

 ರಾಜ್ಯದಲ್ಲಿ ಡೀಸೆಲ್ ಬೆಲೆ ಇಲ್ಲಿದೆ

ರಾಜ್ಯದಲ್ಲಿ ಡೀಸೆಲ್ ಬೆಲೆ ಇಲ್ಲಿದೆ

ಬೆಂಗಳೂರಿನಲ್ಲಿ ಕಳೆದ 14 ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ಬೆಂಗಳೂರಲ್ಲಿ 85.01ರು ಪ್ರತಿ ಲೀಟರ್ ನಷ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ 86.39 ರು ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ 86 ರು ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರು ನಿಂದ 85 ರು ಪ್ಲಸ್ ದರ ಇದೆ.

 ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ನವೆಂಬರ್ 19ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 78.57 ಯುಎಸ್ ಡಾಲರ್ (1 USD=74.42 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.11 ರು ನಷ್ಟಿದೆ, ಡೀಸೆಲ್ ಬೆಲೆ 95.26 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 112 ರು ಗಡಿ ದಾಟಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ಪರಿಷ್ಕರಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+