2 ದಿನ ದರ ಸ್ಥಿರವಾದರೂ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ದುಬಾರಿ

ಬೆಂಗಳೂರು, ಅಕ್ಟೋಬರ್ 19: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಅಕ್ಟೋಬರ್ 19ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಅ. 17 ರಂದು ಪೆಟ್ರೋಲ್ ಬೆಲೆ 35 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ 37 ಪೈಸೆ ಪ್ರತಿ ಲೀಟರ್‌ನಷ್ಟು ಏರಿಕೆಯಾಗಿತ್ತು. ನಂತರ ಸತತ ಎರಡು ದಿನಗಳ ಕಾಲ ಬೆಲೆ ಪರಿಷ್ಕರಿಸಿಲ್ಲ. ಭಾರತದಲ್ಲಿ ಇನ್ನೂ ಮುನ್ನ ಕಳೆದ 7 ದಿನಗಳಿಂದ ಸತತವಾಗಿ ಇಂಧನ ದರ ಏರಿಕೆಯಾಗಿತ್ತು, ನಂತರ ಸತತವಾಗಿ ಬೆಲೆ ಸ್ಥಿರವಾಗಿತ್ತು. ನಂತರ ಸತತವಾಗಿ ನಾಲ್ಕು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಸರಾಸರಿ 35-38 ಪೈಸೆಯಷ್ಟು ಪ್ರತಿ ಲೀಟರ್ ಮೇಲೆ ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 107 ರು ನಿಂದ 110 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ ಸುಮಾರು 3ರು ಇಳಿಕೆಯಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 50 ಬಾರಿ ಹಾಗೂ ಡೀಸೆಲ್ 45 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.55 ರು ಪ್ರತಿ ಲೀಟರ್ ಹಾಗೂ ಡೀಸೆಲ್ 11.25 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 111.77 ರು ಪ್ರತಿ ಲೀಟರ್, ಡೀಸೆಲ್ 102.52 ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 111ರುಗೆ ಏರಿಕೆ

ಪೆಟ್ರೋಲ್ ಪ್ರತಿ ಲೀಟರ್‌ಗೆ 111ರುಗೆ ಏರಿಕೆ

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 109.53 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 100.37 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 111 ರು ಪ್ಲಸ್ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಮಿಕ್ಕಂತೆ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ,ಯಾದಗಿರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 110- 111 ರು ಪೆಟ್ರೋಲ್ ದರ ಇದೆ. ಇತರೆ ಜಿಲ್ಲೆಗಳಲ್ಲಿ 109 ರಿಂದ 110ರು ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆ

ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗುತ್ತಿದೆ. ಶುಕ್ರವಾರದಂದು 35 ಪೈಸೆ ಏರಿಕೆಯಾಗಿದ್ದು, ನಂತರ ಭಾನುವಾರವೂ ಇದೇ ಪ್ರಮಾಣದಲ್ಲಿ ಏರಿದೆ, ನಂತರ 2 ದಿನದಿಂದ ಬೆಲೆ ಏರಿಕೆಯಾಗಿಲ್ಲ. ಬೆಂಗಳೂರಲ್ಲಿ 100.37ರು ಪ್ರತಿ ಲೀಟರ್ ನಷ್ಟಿದೆ. ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ತುಮಕೂರು ಹಾಗೂ ಯಾದಗಿರಿಯಲ್ಲಿ ಅತ್ಯಧಿಕ 100 ರು ಪ್ಲಸ್ ಇದ್ದರೆ, ಮೈಸೂರು ಜಿಲ್ಲೆಯಲ್ಲಿ ಕನಿಷ್ಠ 99.91 ರು ಪ್ರತಿ ಲೀಟರ್‌ನಷ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಕಲಬುರಗಿ, ಹಾಸನ, ಮಂಡ್ಯ, ರಾಮನಗರ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 100 ರಿಂದ 101 ರು ಆಸುಪಾಸಿನಲ್ಲಿದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 19ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 84.92ಯುಎಸ್ ಡಾಲರ್ (1 USD=75.04ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 117.92 ರು ನಷ್ಟಿದೆ, ಡೀಸೆಲ್ ಬೆಲೆ 108.71ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 19) ಮಾಹಿತಿ ಇಲ್ಲಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+