ಆಗಸ್ಟ್ 28ರಂದು ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಬೆಂಗಳೂರು, ಆಗಸ್ಟ್‌ 28: ಸತತ ನಾಲ್ಕನೇ ದಿನ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 28ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ.

ಇಂದು ಇಂಧನ ದರ ಸ್ಥಿರವಾಗಿ ಉಳಿದುಕೊಂಡಿದ್ದು, ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ ಕನಿಷ್ಠ 104 ರೂ ಹಾಗೂ ಗರಿಷ್ಠ 107 ರೂ ಇದೆ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲಿಗೆ ಎಂಟು ಪೈಸೆ ಏರಿಕೆಯಾಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ, ಅಂದರೆ ಪೆಟ್ರೋಲ್ ಪ್ರತಿ ಲೀಟರ್ಗೆ 107.52 ರೂ, ಡೀಸೆಲ್ 96.48 ರೂ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಕೊನೆಯದಾಗಿ ಮಂಗಳವಾರ (ಆಗಸ್ಟ್‌ 24) ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿದ್ದವು. ಇದೀಗ ಸತತ ನಾಲ್ಕು ದಿನಗಳ ನಂತರ ಅದೇ ದರ ಮುಂದುವರೆದಿದೆ.

ದೇಶದ ರಾಜಧಾನಿ ನವದೆಹಲಿಯಲ್ಲಿ ಪ್ರಸ್ತುತ ಲೀಟರ್ ಪೆಟ್ರೋಲಿಗೆ 101.49 ರೂ ಇದ್ದು, ಡೀಸೆಲ್ ದರ 88.92 ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ 28ರಂದು ಕಚ್ಚಾತೈಲ 72.18ಯುಎಸ್ ಡಾಲರ್ (1 USD=73.80 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113.13 ರೂ ನಷ್ಟಿದೆ, ಡೀಸೆಲ್ ಬೆಲೆ 102.39ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ತೆರಿಗೆ ದರ: ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಪೆಟ್ರೋಲ್‌ ಬೆಲೆ 107ರೂ ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.98ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.34ರೂಪಾಯಿಗೆ ಮುಟ್ಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 107.11 ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಬಳ್ಳಾರಿಯಲ್ಲಿಯೂ 17.01 ರೂ ಇದೆ. ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ಬೆಲೆ 106 ಪ್ಲಸ್ ಇದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 20-21ಪೈಸೆಯಷ್ಟು ಇಳಿಕೆಯಾಗಿತ್ತು. ಆಗಸ್ಟ್ 25ರಂದು ಡೀಸೆಲ್ ದರವು ಪ್ರತಿ ಲೀಟರ್‌ಗೆ 94.34 ರೂಪಾಯಿಗೆ ಮುಟ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರೂ ಆಸುಪಾಸಿನಲ್ಲಿದೆ. ಮಿಕ್ಕ ಜಿಲ್ಲೆಯಲ್ಲಿ 95 ರಿಂದ 96 ರೂ ನಷ್ಟಿದೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಆಗಸ್ಟ್ 28) ಸಚಿತ್ರ ಮಾಹಿತಿ ಇಲ್ಲಿದೆ.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

 Petrol Diesel Price On August 28 Across Karnataka

 Petrol Diesel Price On August 28 Across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+