ಮಾರ್ಚ್ 13: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರು, ಮಾರ್ಚ್ 13: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಶನಿವಾರವೂ (ಮಾರ್ಚ್ 13) ಸ್ಥಿರತೆ ಕಾಯ್ದುಕೊಂಡಿದೆ. ಸತತ ಹದಿನಾಲ್ಕು ದಿನಗಳಲ್ಲಿ ದೇಶದ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಫೆಬ್ರವರಿ 27ರಂದು ಕೊನೆಯದಾಗಿ ತೈಲ ಬೆಲೆ ಏರಿಕೆಯಾಗಿದ್ದು, ಲೀಟರ್‌ ಪೆಟ್ರೋಲ್‌ ಗೆ 24 ಪೈಸೆ ಹಾಗೂ ಡೀಸೆಲ್‌ಗೆ 15 ಪೈಸೆ ಏರಿಕೆಯಾಗಿತ್ತು. ಒಟ್ಟಾರೆ ಪೆಟ್ರೋಲ್ ಬೆಲೆ ಲೀಟರಿಗೆ 7.12 ರೂ ಏರಿಕೆಯಾದರೆ, ಡೀಸೆಲ್ 7.45 ರೂ ಏರಿಕೆಯಾಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 69.58 ಯುಎಸ್ ಡಾಲರ್ ತನಕ ತಲುಪಿದೆ. ಡಾಲರ್ ಎದುರು ರೂಪಾಯಿ ಮೌಲ್ಯ72.70 ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.22 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಕರ್ನಾಟಕದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರದ (ಮಾರ್ಚ್ 13ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

Petrol Diesel Price On March 13 Across Karnataka
Petrol Diesel Price On March 13 Across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+