ಕರ್ನಾಟಕದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?
ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಗುರುವಾರ (ಫೆ.25) ತೈಲ ದರ ಪರಿಷ್ಕರಿಸಿಲ್ಲ. ಸತತವಾಗಿ ಎರಡು ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಬದಲಾವಣೆಯಾಗಿಲ್ಲ. ಕಳೆದ ಕೆಲ ದಿನಗಳಿಂದ ಸರಿ ಸುಮಾರು 30-35 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 25-30 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ. ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.63 ಪ್ರತಿ ಲೀಟರ್ ಹಾಗೂ ಡೀಸೆಲ್ 4.84 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಇಂದಿನ ಇಂಧನ ದರ ವಿವರ ಇಲ್ಲಿದೆ...
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.98 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.21ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಿಂದ ಮಂಗಳೂರು ತನಕ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..













Click it and Unblock the Notifications