ಫೆ.24ರಂದು ಕರ್ನಾಟಕದ ಪಟ್ಟಣಗಳಲ್ಲಿ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು, ಫೆಬ್ರವರಿ 24: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ. ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ. ಒಟ್ಟಾರೆ ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.63 ಪ್ರತಿ ಲೀಟರ್ ಹಾಗೂ ಡೀಸೆಲ್ 4.84 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ. ಆದರೆ, ಬುಧವಾರ ಇಂಧನ ದರದಲ್ಲಿ ಸ್ಥಿರತೆ ಕಂಡು ಬಂದಿದೆ ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ಇಂದಿನ ಇಂಧನ ದರ ವಿವರ ಇಲ್ಲಿದೆ...

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.98 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.21ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸರಾಸರಿ 63 ರಿಂದ 65 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಕೆಲ ರಾಜ್ಯಗಳಲ್ಲಿ ಇಂಧನ ಮೇಲಿನ ಸುಂಕ ಇಳಿಕೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಅಸ್ಸಾಂ , ಮೇಘಾಲಯ ಹಾಗೂ ನಾಗಾಲ್ಯಾಂಡ್ ನಲ್ಲಿ ವ್ಯಾಟ್, ಸೆಸ್ ಇಳಿಕೆ ಮಾಡಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ ಸತತವಾಗಿ 100 ರು ಗಡಿ ದಾಖಲೆ ಬರೆದಿತ್ತು.

ಬಾಗಲಕೋಟೆಯಿಂದ ಕೋಲಾರದ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol Diesel Price Rate on on Feb 24 across Karnataka
Petrol Diesel Price Rate on on Feb 24 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+