ಸೆ.18ರಂದು ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್, ಡೀಸೆಲ್ ದರ?
ಬೆಂಗಳೂರು, ಸೆಪ್ಟೆಂಬರ್ 18: ನಿರಂತರ ಹದಿಮೂರು ದಿನಗಳಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳು ಶನಿವಾರ, ಸೆಪ್ಟೆಂಬರ್ 18ರಂದು ಇಂಧನ ಬೆಲೆಯಲ್ಲಿ ಯಾವುದೇ ಬೆಲೆ ಪರಿಷ್ಕರಣೆ ಮಾಡಿಲ್ಲ.
ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.
ಯಥಾಸ್ಥಿತಿ ಮುಂದುವರಿಕೆ:
ಕೊನೆಯದಾಗಿ ಸೆಪ್ಟೆಂಬರ್ 5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಆನಂತರ ಯಾವುದೇ ದರ ಪರಿಷ್ಕರಣೆ ಮಾಡಿಲ್ಲ. ಪೆಟ್ರೋಲ್, ಡೀಸೆಲ್ ದರ ದೇಶದ ಎಲ್ಲಾ ಪ್ರಮುಖ ಮಹಾ ನಗರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಗರಿಷ್ಠ ಬೆಲೆ 104 ರೂ ಇಂದ 106 ರೂವರೆಗೂ ಇದೆ.

ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ:
ಇಂಧನದ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಸಂಬಂಧ ಶುಕ್ರವಾರ ಸಭೆ ನಡೆದಿದ್ದು, ಇಂಧನ ಬೆಲೆಯನ್ನು ಜಿಎಸ್‌ಟಿಗೆ ತರಲು ಇದು ಸರಿಯಾದ ಸಮಯವಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶದ ಏಕರೂಪ ತೆರಿಗೆ ನೀತಿ ಆಗಿರುವ ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಸಂಬಂಧ ಸಭೆ ನಡೆದಿದ್ದು, ಕೇಂದ್ರ ಮತ್ತು ರಾಜ್ಯಗಳು ಜಿಎಸ್‌ಟಿ ಆಡಳಿತದ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸೇರಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಫಲವಾಗಿವೆ.
ಮಹಾನಗರಗಳಲ್ಲಿ ಇಂಧನ ಬೆಲೆ:
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಆಗಿದ್ದರೆ, ಡೀಸೆಲ್ ದರ 88.62 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.70 ರೂ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 107.26 ರೂ ಮತ್ತು ಡೀಸೆಲ್ ಬೆಲೆ 96.19 ರೂ. ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ, ಅಂದರೆ 112.76 ರೂ ನಷ್ಟಿದೆ. ಡೀಸೆಲ್ ಬೆಲೆ 102.02 ರೂ ಆಗಿದೆ.

ಜೈವಿಕ ಡೀಸೆಲ್ ಮೇಲಿನ ತೆರಿಗೆ ಇಳಿಕೆ:
ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.
ಶುಕ್ರವಾರ, ಡೀಸೆಲ್‌ನೊಂದಿಗೆ ಬೆರೆಸುವ ಜೈವಿಕ ಡೀಸೆಲ್ ಮೇಲಿನ ಜಿಎಸ್‌ಟಿ ದರವನ್ನು (ತೈಲ ಮಾರುಕಟ್ಟೆ ಕಂಪನಿಗಳು ಬಳಸುವ) ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ 106 ದಾಟಿದ ಜಿಲ್ಲೆಗಳು:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.70 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.04 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೊಪ್ಪಳ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 106 ರೂ ದಾಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.93 ರೂ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ.
ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ:
ಬಹುಪಾಲು ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ 94 ರೂ ಆಸುಪಾಸಿನಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ, ಅಂದರೆ ಪ್ರತಿ ಲೀಟರ್‌ಗೆ 93.30 ರೂ ಇದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರೂ ಆಸುಪಾಸಿನಲ್ಲಿದೆ.
ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಸೆಪ್ಟೆಂಬರ್ 18) ಚಿತ್ರ ಮಾಹಿತಿ ಇಲ್ಲಿದೆ...
ಚಿತ್ರ ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications