ಸೆ.16ರಂದು ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್, ಡೀಸೆಲ್ ದರ?

ಬೆಂಗಳೂರು, ಸೆಪ್ಟೆಂಬರ್ 16: ಸತತ ಹನ್ನೊಂದು ದಿನಗಳಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳು ಗುರುವಾರ, ಸೆಪ್ಟೆಂಬರ್ 16ರಂದು ಇಂಧನ ಬೆಲೆಯಲ್ಲಿ ಯಾವುದೇ ಬೆಲೆ ಪರಿಷ್ಕರಣೆ ಮಾಡಿಲ್ಲ.

ಭಾನುವಾರ ಸೆಪ್ಟೆಂಬರ್ 5ರಂದು ಕೊನೆಯದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಆನಂತರ ಯಾವುದೇ ದರ ಪರಿಷ್ಕರಣೆ ಮಾಡಿಲ್ಲ. ಪೆಟ್ರೋಲ್, ಡೀಸೆಲ್ ದರ ದೇಶದ ಎಲ್ಲಾ ಪ್ರಮುಖ ಮಹಾ ನಗರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಗರಿಷ್ಠ ಬೆಲೆ 104 ರೂ ಇಂದ 106 ರೂವರೆಗೂ ಇದೆ.

ಮಹಾನಗರಗಳಲ್ಲಿ ಇಂಧನ ಬೆಲೆ ಹೀಗಿದೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಆಗಿದ್ದರೆ, ಡೀಸೆಲ್ ದರ 88.62 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 104.70 ರೂ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 94.04 ರೂ ಇದೆ. ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 107.26 ರೂ ಮತ್ತು ಡೀಸೆಲ್ ಬೆಲೆ 96.19 ರೂ. ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.76 ರೂ ನಷ್ಟಿದೆ. ಡೀಸೆಲ್ ಬೆಲೆ 102.02 ರೂ ಆಗಿದೆ.

Petrol Diesel Price Stable On September 16 Across Karnataka

ಇಂಧನದ ಮೇಲೆ ಅಬಕಾರಿ ಸುಂಕ: ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 15ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 74.04ಯುಎಸ್ ಡಾಲರ್(1 USD=73.69ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ.

ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ 106 ದಾಟಿದ ಜಿಲ್ಲೆಗಳು:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.70 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.04 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 106 ರೂ ದಾಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.81 ರೂ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಬಹುಪಾಲು ಜಿಲ್ಲೆಗಳಲ್ಲಿ 104 ರಿಂದ 105 ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ:
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 15-19ಪೈಸೆಯಷ್ಟು ಇಳಿಕೆಯಾಗಿದೆ. ಬಹುಪಾಲು ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ 94 ರೂ ಆಸುಪಾಸಿನಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ, ಅಂದರೆ ಪ್ರತಿ ಲೀಟರ್‌ಗೆ 93.47 ರೂ ಇದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರೂ ಆಸುಪಾಸಿನಲ್ಲಿದೆ.

Petrol Diesel Price Stable On September 16 Across Karnataka

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಸೆಪ್ಟೆಂಬರ್ 16) ಚಿತ್ರ ಮಾಹಿತಿ ಇಲ್ಲಿದೆ.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+