ಸೆ.4ರಂದು ಕರ್ನಾಟಕದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಬೆಂಗಳೂರು, ಸೆಪ್ಟೆಂಬರ್ 4: ತಿಂಗಳ ಮೊದಲ ದಿನ ಇಂಧನ ದರದಲ್ಲಿ ಇಳಿಕೆ ಮಾಡಿದ ನಂತರ ಇದುವರೆಗೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಶನಿವಾರ ಸೆಪ್ಟೆಂಬರ್ 4ರಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರೂ ಕನಿಷ್ಠ ಹಾಗೂ 106.68 ರೂ ಗರಿಷ್ಠ ಇದೆ.

ಭಾರತದಲ್ಲಿ ಬುಧವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಇದೀಗ ಸತತವಾಗಿ ಮೂರು ದಿನಗಳಿಂದ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಭಾರತದ ಎಲ್ಲಾ ಮಹಾ ನಗರಗಳಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.34 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 88.77 ರೂಪಾಯಿಗೆ ತಲುಪಿದೆ.

Petrol Diesel Price Unchanged On September 4 Across Karnataka

ಭಾರತದಲ್ಲಿ ಇಂಧನದ ಮೇಲೆ ಅಬಕಾರಿ ತೆರಿಗೆ
ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ರಾಜಸ್ಥಾನದಲ್ಲಿ ಅತ್ಯಧಿಕ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 04ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 71.39ಯುಎಸ್ ಡಾಲರ್(1 USD=73.10ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113.12 ರೂ ನಷ್ಟಿದೆ. ಡೀಸೆಲ್ ಬೆಲೆ 102.36 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.39 ರೂ ಪ್ರತಿ ಲೀಟರ್, ಡೀಸೆಲ್ 96.33 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 104.84 ರೂ ಇದ್ದು, ಡೀಸೆಲ್ ಬೆಲೆ 94.19 ರೂ ಇದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸಸೆಲ್ ಬೆಲೆಯಲ್ಲಿ ಕೆಲವು ಬದಲಾವಣೆಗಳಾಗಿವೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol Diesel Price Unchanged On September 4 Across Karnataka

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆಯಾಗಿದೆ. ಬೆಳಗಾವಿ, ಬೀದರ್, ಚಾಮರಾಜನಗರದಲ್ಲಿ ಇಳಿಕೆಯಾಗಿದೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 106 ರೂ ದಾಟಿದ ಜಿಲ್ಲೆಗಳು
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.84 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.19ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 106.68 ರೂ ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಲೆ 106 ರೂ ಪ್ಲಸ್ ಇದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಚಿತ್ರ ವಿನ್ಯಾಸ: ಭರತ್ ಎಚ್‌.ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+