ಕರ್ನಾಟಕದಲ್ಲಿ ಸೆಪ್ಟೆಂಬರ್ 25ರಂದು ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ...

ಬೆಂಗಳೂರು, ಸೆಪ್ಟೆಂಬರ್ 25: ದೇಶದಲ್ಲಿ ಕಳೆದ 19 ದಿನಗಳಿಂದ ತಟಸ್ಥವಾಗಿದ್ದ ಇಂಧನ ಬೆಲೆಯಲ್ಲಿ ಶುಕ್ರವಾರ ಕೊಂಚ ಮಾರ್ಪಾಡು ಮಾಡಲಾಗಿತ್ತು. ಸೆಪ್ಟೆಂಬರ್ 24ರಂದು ಡೀಸೆಲ್‌ ಬೆಲೆಯಲ್ಲಿ 20 ಪೈಸೆಯಷ್ಟು ಏರಿಕೆ ಮಾಡಲಾಗಿದ್ದು, ಶನಿವಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ ಎಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಮಾಹಿತಿ ನೀಡಿವೆ.

ಭಾರತದಲ್ಲಿ ಭಾನುವಾರ (ಸೆ.05) ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಅದಾದ ನಂತರ 19 ದಿನಗಳ ನಂತರ, ಸೆಪ್ಟೆಂಬರ್ 24ರಂದು ಡೀಸೆಲ್ ಬೆಲೆಯಲ್ಲಿ 20 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು. ಈ ಪರಿಷ್ಕರಣೆಯೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರೂ ನಿಂದ 106 ರೂ ಗರಿಷ್ಠ ತಲುಪಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ, ಅಂದರೆ ಲೀಟರ್‌ ಪೆಟ್ರೋಲ್‌ಗೆ 107.26 ರೂ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 96.41ರೂ ಇದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

Petrol Diesel Prices Unchanged On September 25 Across Karnataka

ಪ್ರತಿ ಲೀಟರ್‌ ಪೆಟ್ರೋಲ್ 106 ರೂಗೆ ಏರಿಕೆ:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.70 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.27 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.54 ರೂ ಇದ್ದು, ಇದು ರಾಜ್ಯದಲ್ಲೇ ಅತ್ಯಧಿಕವಾಗಿದೆ. ಬೀದರ್, ದಾವಣಗೆರೆಯಲ್ಲಿ ಪ್ರತಿ ಲೀಟರ್‌ಗೆ 106 ರೂ ಪ್ಲಸ್ ದರ ಇದೆ. ಇತರೆ ಜಿಲ್ಲೆಗಳಲ್ಲಿ 104 ರಿಂದ 105 ರೂನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆಯಲ್ಲಿ ಏರಿಳಿತ:
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 15-19 ಪೈಸೆಯಷ್ಟು ಇಳಿಕೆಯಾಗಿತ್ತು, ಶುಕ್ರವಾರದಂದು 20 ಪೈಸೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 94.27 ರೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 93.70 ರೂ ಪ್ರತಿ ಲೀಟರ್‌ನಷ್ಟಿದೆ. ಬಳ್ಳಾರಿಯಲ್ಲಿ ಗರಿಷ್ಠ, ಅಂದರೆ ಲೀಟರ್‌ಗೆ 95.51 ರೂ ಇದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರೂ ಆಸುಪಾಸಿನಲ್ಲಿದೆ.

Petrol Diesel Prices Unchanged On September 25 Across Karnataka

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ:
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರದ (ಸೆಪ್ಟೆಂಬರ್ 25) ಸಚಿತ್ರ ಮಾಹಿತಿ ಇಲ್ಲಿದೆ.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+