ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 22ರಂದು ರಾಜ್ಯದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ?

|
Google Oneindia Kannada News

ಬೆಂಗಳೂರು, ಮೇ 22: ಶುಕ್ರವಾರ (ಮೇ 21) ರಂದು ದೇಶದಲ್ಲಿ ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪರಿಷ್ಕರಿಸಿ ಕೊಂಚ ಏರಿಕೆ ಮಾಡಿದ್ದು, ಮೇ 22ರಂದು ಇದೇ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ.

ಮೇ 21 ರಂದು ದೇಶದೆಲ್ಲೆಡೆ ಪ್ರತಿ ಲೀಟರ್‌ಗೆ ಪೆಟ್ರೋಲ್ ಸರಾಸರಿ 19 ಪೈಸೆ ಹಾಗೂ ಡೀಸೆಲ್ ಸರಾಸರಿ 29 ಪೈಸೆಯಂತೆ ಏರಿಸಲಾಗಿತ್ತು. ಒಟ್ಟಾರೆ ಮೇ ತಿಂಗಳಿನಲ್ಲಿ 11ನೇ ಬಾರಿ ಬೆಲೆ ಏರಿಕೆ ಮಾಡಲಾಗಿತ್ತು. ನವದೆಹಲಿಯಲ್ಲಿ ಶನಿವಾರ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 93.04 ರೂ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 83.80 ರೂ ಆಗಿದೆ. ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಬೆಲೆ, ಅಂದರೆ ಲೀಟರ್‌ ಪೆಟ್ರೋಲ್ಗೆ 99.32 ರೂ ಇದ್ದರೆ, ಡೀಸೆಲ್ ಬೆಲೆ 91.01ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆಯಿಂದ ಮಾಹಿತಿ ಸಿಕ್ಕಿದೆ.

Petrol Diesel Rate Remains Unchanged On May 22 Across Karnataka

ಕಚ್ಚಾ ತೈಲ ಬೆಲೆ ನೋಡಿಕೊಂಡು ಬೆಲೆ ನಿರ್ಧಾರ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 22ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

Petrol Diesel Rate Remains Unchanged On May 22 Across Karnataka

(ವಿನ್ಯಾಸ: ಭರತ್ ಎಚ್.ಸಿ)

English summary
Petrol and diesel price remained unchanged on may 22 in karnataka. Here is details on Petrol Diesel Price Rate on Saturday (May 22) across Karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X