ಕರ್ನಾಟಕದಲ್ಲಿ ಪೆಟ್ರೋಲ್ ದಾಖಲೆ ಪ್ರತಿ ಲೀಟರ್‌ಗೆ 106 ರು!

ಬೆಂಗಳೂರು, ಜುಲೈ 8: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 8ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ 4ರಿಂದ ಇಂದಿನ ತನಕ ಒಟ್ಟು 37 ಬಾರಿ ಹಾಗೂ ಜೂನ್ ತಿಂಗಳಲ್ಲೇ 19 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 08ರಂದು ಪೆಟ್ರೋಲ್ ಬೆಲೆ ಸರಾಸರಿ 34 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 9 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 106.59ರು ಪ್ರತಿ ಲೀಟರ್, ಡೀಸೆಲ್ 97.18ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 106 ರು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 103.93ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.99ರೂಪಾಯಿಗೆ ಮುಟ್ಟಿದೆ. ಚಿಕ್ಕಮಗಳೂರಿನಲ್ಲಿಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 106.06ರು ಇದ್ದು, ರಾಜ್ಯದಲ್ಲೇ ದುಬಾರಿ ಎನಿಸಿದೆ. ಎರಡನೇ ಸ್ಥಾನದಲ್ಲಿ ಬಳ್ಳಾರಿಯಿದ್ದು, 105.28ರು ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 73.41ಯುಎಸ್ ಡಾಲರ್(1 USD=74.71ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 08) ಸಚಿತ್ರ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್. ಸಿ.

Petrol, Diesel Rates hiked on July 08 across Karnataka
Petrol, Diesel Rates hiked on July 08 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+