ಜುಲೈ 14: ಕರ್ನಾಟಕದಲ್ಲಿಉತ್ತರ ಕನ್ನಡದಲ್ಲಿ ಇಂಧನ ದರ ಅಧಿಕ

ಬೆಂಗಳೂರು, ಜುಲೈ 14: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 14ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ.

ಮೇ 4ರಿಂದ ಇಂದಿನ ತನಕ ಒಟ್ಟು 39 ಬಾರಿ ಹಾಗೂ ಜೂನ್ ತಿಂಗಳಲ್ಲೇ 20 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 12ರಂದು ಪೆಟ್ರೋಲ್ ಬೆಲೆ ಸರಾಸರಿ 28ಪೈಸೆ ಪ್ರತಿ ಲೀಟರ್ ಏರಿಕೆಯಾಗಿದ್ದು, ಡೀಸೆಲ್ ಬೆಲೆ 15 ರಿಂದ 17 ಪೈಸೆ ಪ್ರತಿ ಲೀಟರ್ ನಂತೆ ಇಳಿಕೆಯಾಗಿತ್ತು. ನಂತರ ಎರಡು ದಿನಗಳ ಕಾಲ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.20ರು ಪ್ರತಿ ಲೀಟರ್, ಡೀಸೆಲ್ 97.29ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.58ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.09ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡದಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 106.36ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲೂ ಬೆಲೆ 106 ಪ್ಲಸ್ ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol, Diesel Rates hiked on July 14 across Karnataka

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 75.32ಯುಎಸ್ ಡಾಲರ್(1 USD=74.45ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

Petrol, Diesel Rates hiked on July 14 across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 14) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+