Get Updates
Get notified of breaking news, exclusive insights, and must-see stories!

ಜೂನ್ 14: ಕರ್ನಾಟಕದ 15 ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ 100 ರು

ಬೆಂಗಳೂರು, ಜೂನ್ 14: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 14ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ 4ರಿಂದ ಇಲ್ಲಿ ತನಕ 25 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು. ಜೂನ್ 14ರಂದು ಪೆಟ್ರೋಲ್ ಬೆಲೆ ಸರಾಸರಿ 28 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಸರಾಸರಿ 30 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.58ರು ಪ್ರತಿ ಲೀಟರ್, ಡೀಸೆಲ್ 94.70ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 72ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

Petrol, Diesel Rates Hiked on June 14 across Karnataka

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 72.99ಯುಎಸ್ ಡಾಲರ್(1 USD=73.25ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 107.66ರು ನಷ್ಟಿದೆ, ಡೀಸೆಲ್ ಬೆಲೆ 100.49ರು ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol, Diesel Rates Hiked on June 14 across Karnataka

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.63ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 92.52ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.

ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ದಾವಣಗೆರೆ, ಯಾದಗಿರಿ, ತುಮಕೂರು, ಕೊಪ್ಪಳ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 14ರಂತೆ) ಸಚಿತ್ರ ಮಾಹಿತಿ ಇಲ್ಲಿದೆ. ವಿನ್ಯಾಸ:ಭರತ್ ಎಚ್.ಸಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+