ಕರ್ನಾಟಕದ 15 ಜಿಲ್ಲೆಗಳಲ್ಲಿ ಮತ್ತೆ ಪೆಟ್ರೋಲ್ ಬೆಲೆ 100 ರು ಗೂ ಅಧಿಕ
ಬೆಂಗಳೂರು, ಜೂನ್ 15: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 15ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಮೇ 4ರಿಂದ ಇಲ್ಲಿ ತನಕ 25 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು. ಜೂನ್ 14ರಂದು ಪೆಟ್ರೋಲ್ ಬೆಲೆ ಸರಾಸರಿ 28 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಸರಾಸರಿ 30 ಪೈಸೆ ಪ್ರತಿ ಲೀಟರ್ನಂತೆ ಏರಿಕೆಯಾಗಿತ್ತು.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.58ರು ಪ್ರತಿ ಲೀಟರ್, ಡೀಸೆಲ್ 94.70ರು ಪ್ರತಿ ಲೀಟರ್ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.
ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 72ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 73.51ಯುಎಸ್ ಡಾಲರ್(1 USD=73.33ರು) ಪ್ರತಿ ಬ್ಯಾರೆಲ್ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 107.66ರು ನಷ್ಟಿದೆ, ಡೀಸೆಲ್ ಬೆಲೆ 100.49ರು ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 99.63ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 92.52ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.
ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ದಾವಣಗೆರೆ, ಯಾದಗಿರಿ, ತುಮಕೂರು, ಕೊಪ್ಪಳ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 15ರಂತೆ) ಸಚಿತ್ರ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್.ಸಿ.
-
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications