ಕರ್ನಾಟಕದ 22ಜಿಲ್ಲೆಗಳಲ್ಲಿ ಮತ್ತೆ ಪೆಟ್ರೋಲ್ ಬೆಲೆ 100 ರು ಗೂ ಅಧಿಕ
ಬೆಂಗಳೂರು, ಜೂನ್ 16: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 16ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ 4ರಿಂದ ಇಲ್ಲಿ ತನಕ 26 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು. ಜೂನ್ 16ರಂದು ಪೆಟ್ರೋಲ್ ಬೆಲೆ ಸರಾಸರಿ 25 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಸರಾಸರಿ 13 ಪೈಸೆ ಪ್ರತಿ ಲೀಟರ್ನಂತೆ ಏರಿಕೆಯಾಗಿತ್ತು.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.82ರು ಪ್ರತಿ ಲೀಟರ್, ಡೀಸೆಲ್ 94.84ರು ಪ್ರತಿ ಲೀಟರ್ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.
ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 73ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 74.68ಯುಎಸ್ ಡಾಲರ್(1 USD=73.29ರು) ಪ್ರತಿ ಬ್ಯಾರೆಲ್ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 107.79ರು ನಷ್ಟಿದೆ, ಡೀಸೆಲ್ ಬೆಲೆ 100.51ರು ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 99.89ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 92.66ರೂಪಾಯಿಗೆ ಮುಟ್ಟಿದೆ.

ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ದಾವಣಗೆರೆ, ಯಾದಗಿರಿ, ತುಮಕೂರು, ಕೊಪ್ಪಳ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರದಲ್ಲಿ 99.99 ಪ್ರತಿ ಲೀಟರ್ ನಂತಿದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 16ರಂತೆ) ಸಚಿತ್ರ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್.ಸಿ.
-
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
Zomato: ಹಸಿದ ಹೊಟ್ಟೆಗೆ ಜೊಮ್ಯಾಟೋ ಬರೆ.. ಆನ್ಲೈನ್ ಊಟ ಬಲು ದುಬಾರಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications