ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಜೂನ್ 24ರ ಇಂಧನ ದರ

|
Google Oneindia Kannada News

ಬೆಂಗಳೂರು, ಜೂನ್ 24: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 23ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು. ಜೂನ್ 24ರಂದು ಪೆಟ್ರೋಲ್ 29 ಪೈಸೆ, ಡೀಸೆಲ್ 7 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 103.89ರು ಪ್ರತಿ ಲೀಟರ್, ಡೀಸೆಲ್ 95.79ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 73ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರುಗೂ ಅಧಿಕ ಏರಿಕೆಯಾಗಿತ್ತು. ಮೇ 4ರ ನಂತರ ಒಟ್ಟು 27 ಬಾರಿ ಬೆಲೆ ಏರಿಕೆ ಮಾಡಲಾಗಿದ್ದು, ಪೆಟ್ರೋಲ್ 6.82 ರು ಹಾಗೂ ಡೀಸೆಲ್ 7.24 ರು ನಷ್ಟು ಏರಿಕೆ ಕಂಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 75.27ಯುಎಸ್ ಡಾಲರ್(1 USD=74.21ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 108.73ರು ನಷ್ಟಿದೆ, ಡೀಸೆಲ್ ಬೆಲೆ 101.28ರು ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಶತಕ ಬಾರಿಸಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.03ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 93.61ರೂಪಾಯಿಗೆ ಮುಟ್ಟಿದೆ. ಶಿವಮೊಗ್ಗ, ಕೊಪ್ಪಳ, ಕೊಡಗು,ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 102 ರು ಪ್ರತಿ ಲೀಟರ್ ದಾಟಿದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

ಕಲಬುರಗಿಯಿಂದ ಮಂಡ್ಯ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 24ರಂತೆ) ಸಚಿತ್ರ ಮಾಹಿತಿ ಇಲ್ಲಿದೆ.

Petrol, Diesel Rates hiked on June 24 across Karnataka
Petrol, Diesel Rates hiked on June 24 across Karnataka
English summary
Petrol Diesel Price Rate hiked on Thrusday (June 24) across Karnataka. A litre of petrol now costs Rs 101.03, Diesel at Rs 93.61 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X