ಜೂನ್ 27: ಕರ್ನಾಟಕದ ಪ್ರಮುಖ ಪಟ್ಟಣಗಳ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು, ಜೂನ್ 27: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 27ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರುಗೂ ಅಧಿಕ ಏರಿಕೆಯಾಗಿತ್ತು. ಮೇ 4 ರಿಂದ 31 ಬಾರಿ ಇಂಧನ ಏರಿಕೆಯಾಗಿದ್ದು, ಒಟ್ಟು ಪೆಟ್ರೋಲ್ 7.71ರು ಹಾಗೂ ಡೀಸೆಲ್ 7.92ರು ನಷ್ಟು ಏರಿಕೆ ಕಂಡಿದೆ. ಜೂನ್ 27 ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ಪೈಸೆಯಷ್ಟು ಏರಿಕೆಯಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 104.56ರು ಪ್ರತಿ ಲೀಟರ್, ಡೀಸೆಲ್ 96.42ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

Petrol, Diesel Rates hiked on June 27 across Karnataka

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 76.18ಯುಎಸ್ ಡಾಲರ್(1 USD=74.51ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 109.29ರು ನಷ್ಟಿದೆ, ಡೀಸೆಲ್ ಬೆಲೆ 101.77ರು ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 103ರು ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.75ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.25ರೂಪಾಯಿಗೆ ಮುಟ್ಟಿದೆ. ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 103.63 ರು, ಉತ್ತರ ಕನ್ನಡ ಜಿಲ್ಲೆಯಲ್ಲಿ 103.40ರು, ದಾವಣಗೆರೆಯಲ್ಲಿ 103.62ರು, ಶಿವಮೊಗ್ಗದಲ್ಲಿ 103.08ರು ಪ್ರತಿ ಲೀಟರ್ ನಷ್ಟಿದೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರುಮ್, ಗದಗ,ಹಾವೇರಿ, ಕೊಪ್ಪಳ, ರಾಯಚೂರು, ತುಮಕೂರು, ಯಾದಗಿರಿಯಲ್ಲಿ ಪೆಟ್ರೋಲ್ ಬೆಲೆ 102 ಪ್ಲಸ್ ರು ಪ್ರತಿ ಲೀಟರ್ ದಾಟಿದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ. ಮಿಕ್ಕ ಜಿಲ್ಲೆಗಳಲ್ಲಿ 100 ರು ಪ್ಲಸ್ ದರ ಇದೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 27ರಂತೆ) ಸಚಿತ್ರ ಮಾಹಿತಿ ಇಲ್ಲಿದೆ. ""

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+