ಇಂಧನ ದರ ಏರಿಕೆ; ರಾಜ್ಯದಲ್ಲಿ ಎಷ್ಟಾಗಿದೆ ಪೆಟ್ರೋಲ್, ಡೀಸೆಲ್ ಬೆಲೆ...
ಬೆಂಗಳೂರು, ಜುಲೈ 10: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 10ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ದೇಶಾದ್ಯಂತ ಶನಿವಾರ ಮತ್ತೆ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.
ಕರ್ನಾಟದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100ರೂ ದಾಟಿದೆ. ಹಲವು ಜಿಲ್ಲಾ ಕೇಂದ್ರಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 105 ರೂ ಆಗಿದೆ.
ಜೂನ್ ತಿಂಗಳಲ್ಲೇ 19 ಬಾರಿ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ. ಜುಲೈ 09ರಂದು ಪೆಟ್ರೋಲ್ ಬೆಲೆ ಸರಾಸರಿ ಲೀಟರ್‌ಗೆ 34 ಪೈಸೆ ಹಾಗೂ ಡೀಸೆಲ್ ಬೆಲೆ 9 ಪೈಸೆಯಂತೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ, ಅಂದರೆ ಲೀಟರ್ ಪೆಟ್ರೋಲ್‌ಗೆ 106.93 ರೂಪಾಯಿ, ಡೀಸೆಲ್ 97.46 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.
ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ: ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.29 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26 ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 106.31ರು ಇದ್ದು, ರಾಜ್ಯದಲ್ಲೇ ದುಬಾರಿ ಎನಿಸಿದೆ. ಎರಡನೇ ಸ್ಥಾನದಲ್ಲಿ ದಾವಣಗೆರೆ ಇದ್ದು 106.22 ರೂ ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 74.13ಯುಎಸ್ ಡಾಲರ್(1 USD=74.72ರು) ಪ್ರತಿ ಬ್ಯಾರೆಲ್‌ನಷ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಸಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 10) ಸಚಿತ್ರ ಮಾಹಿತಿ ಇಲ್ಲಿದೆ.
ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications