ಕರ್ನಾಟಕದ ವಿವಿಧೆಡೆ ಜೂನ್ 26ರ ಇಂಧನ ದರ...
ಬೆಂಗಳೂರು, ಜೂನ್ 26: ಶನಿವಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಿ, ಶನಿವಾರ ಲೀಟರಿಗೆ 35 ಪೈಸೆಯಷ್ಟು ಬೆಲೆ ಏರಿಸಿವೆ.
ಜೂನ್ ತಿಂಗಳಿನಲ್ಲಿ 14ನೇ ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ 100 ರೂ ಗಡಿ ದಾಟಿದ ರಾಜ್ಯಗಳ ಪಟ್ಟಿಗೆ ಈಗ ಪಾಟ್ನಾ ಹಾಗೂ ತಿರುವನಂತಪುರಂ ಕೂಡ ಸೇರಿಕೊಂಡಿದೆ. ಮುಂಬೈ ನಗರದಲ್ಲಿ ಗರಿಷ್ಠ ಬೆಲೆ ದಾಖಲಾಗಿದ್ದು, ಲೀಟರ್ ಪೆಟ್ರೋಲ್‌ಗೆ 104.22 ರೂ ಗೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ನಿರ್ಧರಿತವಾಗುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಬೆಲೆ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರ ನೀಡುತ್ತವೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.39 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಪ್ರತಿ ಲೀಟರ್‌ಗೆ 93.99 ರೂಪಾಯಿಗೆ ಮುಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಜೂನ್ 26ರಂದು ಎಷ್ಟಿದೆ? ಇಲ್ಲಿದೆ ಮಾಹಿತಿ...

Recommended Video
ವಿನ್ಯಾಸ: ಭರತ್ ಎಚ್.ಸಿ.












Click it and Unblock the Notifications