ಏಪ್ರಿಲ್ 10: ಕರ್ನಾಟಕದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ...

ನವದೆಹಲಿ, ಏಪ್ರಿಲ್ 10: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಸತತ ಹನ್ನೊಂದು ದಿನಗಳಿಂದ ಪರಿಷ್ಕರಣೆ ಮಾಡಿಲ್ಲ. ಸದ್ಯಕ್ಕೆ ದೇಶದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 95.24 ರೂ ಇದ್ದರೆ, ಡೀಸೆಲ್ ದರ 87.27ರೂಪಾಯಿ ಇದೆ.

ವರ್ಷದ ಮೊದಲ ಎರಡು ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತ 21 ಬಾರಿ ಏರಿಕೆ ಮಾಡಲಾಗಿತ್ತು. ಆದರೆ ಏಪ್ರಿಲ್‌ನಲ್ಲಿ ತೈಲ ಬೆಲೆ ಕೊಂಚ ಇಳಿಮುಖವಾಗಿತ್ತು. ಆನಂತರ ಸತತ ಹನ್ನೊಂದು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಈ ನಡುವೆ ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕವಾಗಿರುವುದಾಗಿ ಅಂಕಿ ಅಂಶ ತಿಳಿಸಿದೆ. ಡಿಸೆಂಬರ್ 2019ರ ನಂತರ ಭಾರಿ ಬೇಡಿಕೆ ಕಂಡು ಬಂದಿದೆ. ಕಳೆದ ತಿಂಗಳು, ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪೆಟ್ರೋಲ್ ಶೇ 27.4 ರಷ್ಟು ಅಧಿಕ ಮಾರಾಟ ಕಂಡು ಬಂದಿದೆ. ಇದೇ ವೇಳೆ ಡಿಸೇಲ್ ಬಳಕೆ ಶೇ 27.6ರಷ್ಟು ಏರಿಕೆಯಾಗಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.59ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.75ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

Petrol Diesel Rates on April 10 Across Karnataka

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಏಪ್ರಿಲ್ 10ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol Diesel Rates on April 10 Across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+