ಏಪ್ರಿಲ್ 3ರಂದು ಕರ್ನಾಟಕದ ವಿವಿಧೆಡೆ ಇಂಧನ ಬೆಲೆ ಎಷ್ಟಿದೆ?
ಬೆಂಗಳೂರು, ಏಪ್ರಿಲ್ 3: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಸತತ ನಾಲ್ಕು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.59ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.75 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.
ಫೆಬ್ರವರಿ ತಿಂಗಳೊಂದರಲ್ಲಿಯೇ ಸುಮಾರು 14 ಬಾರಿ ತೈಲ ಬೆಲೆಯನ್ನು ಏರಿಸಲಾಗಿತ್ತು. ಆನಂತರ ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ. ತೈಲ ಬೆಲೆಯೂ ಸ್ಥಿರತೆ ಕಾಯ್ದುಕೊಂಡಿದೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಏಪ್ರಿಲ್ 3ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.













Click it and Unblock the Notifications