• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಎಲ್ಲೆಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದೆ!

|
Google Oneindia Kannada News

ಬೆಂಗಳೂರು, ಜೂನ್ 09: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 09ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಆದರೆ, ಮೇ 4ರಿಂದ ಇಲ್ಲಿ ತನಕ 22ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಒಂದು ತಿಂಗಳಲ್ಲಿ ಪೆಟ್ರೋಲ್ 5ರು ಹಾಗೂ ಡೀಸೆಲ್ 6 ರು ನಷ್ಟು ಏರಿಕೆಯಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿದೆ. ಜೂನ್ 9ರಂದು ಸರಾಸರಿ 23-25 ಪೈಸೆ ಏರಿಕೆಯಾಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 101.76ರು ಪ್ರತಿ ಲೀಟರ್, ಡೀಸೆಲ್ 93.85ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಕೆಲ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 70ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಂಡು 72.65 ಯುಎಸ್ ಡಾಲರ್(1 USD=72.92ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 106.64ರು ನಷ್ಟಿದೆ, ಡೀಸೆಲ್ ಬೆಲೆ 99.50 ರು ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 98.84ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 91.75ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.40ರೂಪಾಯಿ, ಡೀಸೆಲ್ ದರ ಪ್ರತಿ ಲೀಟರ್‌ಗೆ 93.14ರು ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 08ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)

English summary
Petrol Diesel Price Rate on Wednesday (June 09) across Karnataka. A litre of petrol now costs Rs 98.84, Diesel at Rs 91.75per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X