ಬೆಂಗಳೂರು ಸೇರಿದಂತೆ ಜಿಲ್ಲಾಕೇಂದ್ರಗಳಲ್ಲಿ ಮಾ.1ರಂದು ಇಂಧನ ದರ

ಬೆಂಗಳೂರು, ಮಾರ್ಚ್ 1: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಸೋಮವಾರದಂದು ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಬೆಂಗಳೂರು ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ತಗ್ಗಿದೆ.

ಕಳೆದ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್ ಹಾಗೂ ಡೀಸೆಲ್ 4.99 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ 1.7 ರಷ್ಟು ಏರಿಕೆ ಕಂಡು 65.49 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 7 ಪೈಸೆ ಇಳಿಕೆಯಾಗಿ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 5 ಪೈಸೆ ಇಳಿಕೆ ಕಂಡು 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

Petrol, Diesel Rates on March 01 across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಿಂದ ಬೀದರ್ ತನಕ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol, Diesel Rates on March 01 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+