ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾರದಿಂದ ಯಾದಗಿರಿ ತನಕ ಮಾ.5ರ ಇಂಧನ ದರ

|
Google Oneindia Kannada News

ಬೆಂಗಳೂರು, ಮಾರ್ಚ್ 5: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಶುಕ್ರವಾರದಂದು ಯಾವುದೇ ಬದಲಾವಣೆಯಾಗಿಲ್ಲ. ಸತತ ಆರು ದಿನಗಳಿಂದ ಇಂಧನ ದರವನ್ನು ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಪರಿಷ್ಕರಿಸಿಲ್ಲ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿದೆ.

ಕಳೆದ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಈ ತಿಂಗಳಲ್ಲಿ ಪೆಟ್ರೋಲ್ ಒಟ್ಟು 4.87 ಪ್ರತಿ ಲೀಟರ್ ಹಾಗೂ ಡೀಸೆಲ್ 4.99 ಪ್ರತಿ ಲೀಟರ್ ನಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ 1.40 ರಷ್ಟು ಏರಿಕೆ ಕಂಡು 68.14 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ದೇಶದಲ್ಲಿ ರಾಜಸ್ಥಾನದ ಶ್ರೀ ಗಂಗಾನಗರ್ ಎಂಬಲ್ಲಿ ಅತ್ಯಧಿಕ ದರದಲ್ಲಿ ಇಂಧನ ಮಾರಾಟವಾಗುತ್ತಿದೆ. ಇಲ್ಲಿ ಪ್ರತಿ ಲೀಟರ್‌ಗೆ 101. 83 ರೂಪಾಯಿ ಹಾಗೂ ಡೀಸೆಲ್ ದರವು ಪ್ರತಿ ಲೀಟರ್‌ಗೆ 93.77 ರೂಪಾಯಿ ಮುಟ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಕೋಲಾರದಿಂದ ಯಾದಗಿರಿ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol, Diesel Rates on March 05 across Karnataka
Petrol, Diesel Rates on March 05 across Karnataka
English summary
Petrol Diesel Price Rate on Friday(March 05) across Karnataka. A litre of petrol now costs Rs 94.22, Diesel at Rs 86.37 per litre in Bengaluru. Check out prices of other towns of Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X