ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್16: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಮಾರ್ಚ್ 16: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ(ಮಾರ್ಚ್ 16)ದಂದು ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಆದರೆ, ಮಾರ್ಚ್ 11ರಂದು ಬಳ್ಳಾರಿಯಲ್ಲಿ ಪೆಟ್ರೋಲ್ 13 ಪೈಸೆ ಇಳಿಕೆ ಕಂಡು ಪ್ರತಿ ಲೀಟರ್ ಬೆಲೆ 95. 69ರು ಆಗಿದ್ದರೆ, ಡೀಸೆಲ್ 12 ಪೈಸೆ ಇಳಿಕೆ ಕಂಡು ಪ್ರತಿ ಲೀಟರ್ ಬೆಲೆ 87.73 ರು ಆಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.

ಪೆಟ್ರೋಲ್, ಡೀಸೆಲ್ ದರ: ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ!ಪೆಟ್ರೋಲ್, ಡೀಸೆಲ್ ದರ: ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 68.22 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತನಕ ತಲುಪಿದೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತಗೊಂಡು 72.56 ತಲುಪಿದೆ.

Petrol, Diesel Rates on March 16 across Karnataka

ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ: ನಿರ್ಮಲಾ ಸೀತಾರಾಮನ್ ಹೇಳಿದ್ದೇನು? ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ: ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಬಳ್ಳಾರಿಯಿಂದ ಬೆಳಗಾವಿ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಮಾರ್ಚ್ 16ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol, Diesel Rates on March 16 across Karnataka

ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್‌ನಿಂದ ತೆರಿಗೆ ಹೊರೆ ಇಲ್ಲಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್‌ನಿಂದ ತೆರಿಗೆ ಹೊರೆ ಇಲ್ಲ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Petrol Diesel Price Rate on Tuesday (March 16) across Karnataka. A litre of petrol now costs Rs 94.22, Diesel at Rs 86.37 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X