ಮಾರ್ಚ್18: ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರು, ಮಾರ್ಚ್ 18: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಬುಧವಾರ(ಮಾರ್ಚ್ 18)ದಂದು ಯಾವುದೇ ಬದಲಾವಣೆಯಾಗಿಲ್ಲ. ಕಳೆದ 19 ದಿನಗಳಿಂದ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಆದರೆ, ಮಾರ್ಚ್ 18ರಂದು ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಬೆಲೆ 95. 81ರು ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್ ಬೆಲೆ 87.84ರು ಆಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ಸರಿ ಸುಮಾರು 23-25 ಪೈಸೆಯಂತೆ ಪೆಟ್ರೋಲ್ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 24-26 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಕಂಡಿತ್ತು. ಒಟ್ಟಾರೆ ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿ 64.43 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತನಕ ತಲುಪಿದೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತಗೊಂಡು 72.69ತಲುಪಿದೆ.

ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.22ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.37 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಬೆಳಗಾವಿಯಿಂದ ಬಳ್ಳಾರಿ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಮಾರ್ಚ್ 18ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol, Diesel Rates on March 18 across Karnataka
Petrol, Diesel Rates on March 18 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+