ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್25: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟು?

|
Google Oneindia Kannada News

ಬೆಂಗಳೂರು, ಮಾರ್ಚ್ 25: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಗುರುವಾರ(ಮಾರ್ಚ್ 25)ದಂದು ಕೊಂಚ ಇಳಿಕೆಯಾಗಿದೆ. ಕಳೆದ 24 ದಿನಗಳಿಂದ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ಬೇರೆಡೆ ಸ್ಥಿರವಾಗಿದ್ದರೂ ಏರಿಳಿತ ಕಾಣುತ್ತಿದ್ದ ಬಳ್ಳಾರಿಯಲ್ಲೂ ಇಂದು ಪೆಟ್ರೋಲ್ ಪ್ರತಿ ಲೀಟರ್ ಬೆಲೆ 82ಪೈಸೆ ಇಳಿಕೆಯಾಗಿ 94.96ರು ಆಗಿದ್ದರೆ, ಡೀಸೆಲ್ ಪ್ರತಿ ಲೀಟರ್ ಬೆಲೆ 76 ಪೈಸೆ ಇಳಿಕೆಯಾಗಿ 87.06ರು ಆಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಂಡಿದ್ದರೂ ಭಾರತದಲ್ಲಿ ತೈಲ ಬೆಲೆ ಸ್ಥಿರತೆ ಕಂಡುಕೊಂಡಿತ್ತು. ಚುನಾವಣೆ ಮುಂದಿಟ್ಟುಕೊಂಡು ಬೆಲೆ ಏರಿಕೆ ಮಾಡದೆ ತೈಲ ಕಂಪನಿಗಳು ಗ್ರಾಹಕರ ಹಿತಕಾಯುವ ನೆಪವೊಡ್ಡಿದ್ದರು. ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿತ್ತು.

ಮಾರ್ಚ್‌ 25: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?ಮಾರ್ಚ್‌ 25: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿ 63.86 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತನಕ ತಲುಪಿದೆ. ಡಾಲರ್ ಎದುರು ರುಪಾಯಿ ಮೌಲ್ಯ ಸುಧಾರಣೆಗೊಂಡು 72.59 ತಲುಪಿದೆ.

Petrol, Diesel Rates on March 25 across Karnataka

ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.82ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.99 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಮಾರ್ಚ್ 25ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol, Diesel Rates on March 25 across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary
Petrol Diesel Price Rate on Thrusday (March 25) across Karnataka. A litre of petrol now costs Rs 93.82, Diesel at Rs 85.99 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X