ಮೇ 04: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟು?
ಬೆಂಗಳೂರು, ಮೇ 04: ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸಲಾಗಿದೆ. ಪ್ರಮುಖ ತೈಲ ಕಂಪನಿಗಳು ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿರಲಿಲ್ಲ. ಪೆಟ್ರೋಲ್ ಪ್ರತಿ ಲೀಟರ್ ಮೇಲೆ 15ಪೈಸೆ ಹಾಗೂ ಡೀಸೆಲ್ 18ಪೈಸೆ ಪ್ರತಿ ಲೀಟರ್ ಏರಿಕೆ ಕಂಡಿದೆ. ದೆಹಲಿಯಲ್ಲಿ ದರ ಪರಿಷ್ಕರಣೆ ಬಳಿಕ ಪೆಟ್ರೋಲ್ ಪ್ರತಿ ಲೀಟರ್ 90.55 ರು ಹಾಗೂ ಡೀಸೆಲ್ ಪ್ರತಿ ಲೀಟರ್ 80.91ರು ಆಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 67.58ಯುಎಸ್ ಡಾಲರ್(1 USD=73.92ರು) ಪ್ರತಿ ಬ್ಯಾರೆಲ್ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಪೆಟ್ರೋಲ್ ದರ 98ಪೈಸೆ ಏರಿಕೆಯಾಗಿದ್ದು, 95.32ರು ಪ್ರತಿ ಲೀಟರ್ ಹಾಗೂ ಡೀಸೆಲ್ ದರ 92ಪೈಸೆ ಏರಿಕೆಯಾಗಿದ್ದು, 87.40ರು ನಷ್ಟಿದೆ. ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 93.67 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 85.87 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 04ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)