ಮೇ 06: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಎಷ್ಟು?

ಬೆಂಗಳೂರು, ಮೇ 06: ಐದು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸತತವಾಗಿ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸಲಾಗಿದೆ. ಮೇ 6ರಂದು ಪೆಟ್ರೋಲ್ ಪ್ರತಿ ಲೀಟರ್ ಮೇಲೆ 25ಪೈಸೆ ಹಾಗೂ ಡೀಸೆಲ್ 30 ಪೈಸೆ ಪ್ರತಿ ಲೀಟರ್ ಏರಿಕೆ ಕಂಡಿದೆ. ದೆಹಲಿಯಲ್ಲಿ ದರ ಪರಿಷ್ಕರಣೆ ಬಳಿಕ ಪೆಟ್ರೋಲ್ ಪ್ರತಿ ಲೀಟರ್ 90.99ರು ಹಾಗೂ ಡೀಸೆಲ್ ಪ್ರತಿ ಲೀಟರ್ 81.42ರು ಆಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 69.14ಯುಎಸ್ ಡಾಲರ್(1 USD=73.85ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol, Diesel Rates on May 06 across Karnataka

ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಪೆಟ್ರೋಲ್ ದರ 24ಪೈಸೆ ಏರಿಕೆಯಾಗಿದ್ದು, 95.74ರು ಪ್ರತಿ ಲೀಟರ್ ಹಾಗೂ ಡೀಸೆಲ್ ದರ 30ಪೈಸೆ ಏರಿಕೆಯಾಗಿದ್ದು, 87.91ರು ನಷ್ಟಿದೆ. ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.77 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.31 ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 06ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)

Petrol, Diesel Rates on May 06 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+