ಮೇ 11: ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟು?

ಬೆಂಗಳೂರು, ಮೇ 11: ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು. ನಂತರ ಎರಡು ದಿನಗಳಿಂದ ದರ ಸ್ಥಿರವಾಗಿತ್ತು. ಈಗ ಸತತವಾಗಿ ಎರಡನೇ ದಿನದಂದು ಮತ್ತೆ ಏರಿಕೆ ಹಾದಿ ಹಿಡಿಯಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಕುಸಿತ ಕಂಡು 67.87ಯುಎಸ್ ಡಾಲರ್(1 USD=73.54ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್ ಹಾಗೂ ಏಪ್ರಿಲ್ ತಿಂಗಳಲ್ಲಿ 66 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.85 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 87.31 ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.

ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 96.46 ರೂಪಾಯಿ, ಡೀಸೆಲ್ ದರವು ಪ್ರತಿ ಲೀಟರ್‌ಗೆ 88.80 ರು ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 10ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)

Petrol, Diesel Rates on May 11 across Karnataka
Petrol, Diesel Rates on May 11 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+