ಮೇ 17: ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟು?
ಬೆಂಗಳೂರು, ಮೇ 17: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮೇ 17ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸತತವಾಗಿ ನಾಲ್ಕನೇ ದಿನ ಪರಿಷ್ಕರಿಸಲಾಗಿತ್ತು. ನಂತರ ಎರಡು ದಿನಗಳಿಂದ ದರ ಸ್ಥಿರವಾಗಿತ್ತು. ನಂತರ ಬೆಲೆ ಏರಿಕೆ ಮಾಡಲಾಗಿತ್ತು.
ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.
ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 68.53ಯುಎಸ್ ಡಾಲರ್(1 USD=73.24ರು) ಪ್ರತಿ ಬ್ಯಾರೆಲ್ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 95.33ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 87.92 ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.
ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 75 ಪೈಸೆ ಏರಿಕೆಯಾಗಿ 97.38ರೂಪಾಯಿ, ಡೀಸೆಲ್ ದರ 67 ಪೈಸೆ ಏರಿಕೆ ಕಂಡು ಪ್ರತಿ ಲೀಟರ್ಗೆ 89.82ರು ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 17ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)