ಮೇ 21: ಕರ್ನಾಟಕದ ವಿವಿಧ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟು?

ಬೆಂಗಳೂರು, ಮೇ 21: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮೇ 21ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಈ ತಿಂಗಳಲ್ಲಿ ಒಟ್ಟಾರೆ 11ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ.

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರು ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 66ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

Petrol, Diesel Rates on May 21 across Karnataka

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಕುಸಿತ ಕಂಡು 65.27ಯುಎಸ್ ಡಾಲರ್(1 USD=72.97ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 104 ರು ನಷ್ಟಿದೆ, ಡೀಸೆಲ್ ಬೆಲೆ 96.62 ರು ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 96.14ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 88.84ರೂಪಾಯಿಗೆ ಮುಟ್ಟಿದೆ. ಕರ್ನಾಟಕದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ.

Petrol, Diesel Rates on May 21 across Karnataka

ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 97.90ರೂಪಾಯಿ, ಡೀಸೆಲ್ ದರ ಪ್ರತಿ ಲೀಟರ್‌ಗೆ 90.47ರು ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 21ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..(ವಿನ್ಯಾಸ: ಭರತ್ ಎಚ್.ಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+