ಮೇ 28ರಂದು ರಾಜ್ಯದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರು, ಮೇ 28: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮೇ 28ರಂದು ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ.

ಗುರುವಾರ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಪೆಟ್ರೋಲ್ ಬೆಲೆ ಲೀಟರಿಗೆ 24 ಪೈಸೆ ಹಾಗೂ ಡೀಸೆಲ್ ಬೆಲೆ 29 ಪೈಸೆಯಂತೆ ಏರಿಕೆ ಮಾಡಲಾಗಿತ್ತು. ಈ ಮೂಲಕ ಈ ತಿಂಗಳಿನಲ್ಲಿ 14ನೇ ಬಾರಿ ಬೆಲೆ ಏರಿಕೆ ಕಂಡಿತ್ತು. ಶುಕ್ರವಾರ, ಮೇ 28ರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿ ಉಳಿದಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಬೆಲೆ ಇದೆ. ಲೀಟರ್ ಪೆಟ್ರೋಲ್ 99.94 ರೂ ಡೀಸೆಲ್ 91.87 ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಮಾಹಿತಿ ನೀಡಿದೆ.

Petrol Diesel Rates on May 28 Across Karnataka

ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 20 ರೂ ಹೆಚ್ಚಾಗಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 67ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 68.36 ಯುಎಸ್ ಡಾಲರ್(1 USD=72.74ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರೂ ಗಡಿ ದಾಟಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ, 104.42 ರೂ ನಷ್ಟಿದೆ, ಡೀಸೆಲ್ ಬೆಲೆ 97.18 ರೂ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol Diesel Rates on May 28 Across Karnataka

ಬಳ್ಳಾರಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 97.77ರೂಪಾಯಿ, ಡೀಸೆಲ್ ದರ ಪ್ರತಿ ಲೀಟರ್‌ಗೆ 90.62ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 28ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...
ವಿನ್ಯಾಸ: ಭರತ್ ಎಚ್.ಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+