ಮೇ 29ರಂದು ಇಂಧನ ಬೆಲೆ ಏರಿಕೆ; ರಾಜ್ಯದ ವಿವಿಧೆಡೆ ಎಷ್ಟು ಏರಿಕೆಯಾಗಿದೆ?

ಬೆಂಗಳೂರು, ಮೇ 29: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಮೇ 29ರಂದು ಇಂಧನ ದರ ಪರಿಷ್ಕರಣೆ ಮಾಡಿ ಬೆಲೆ ಏರಿಕೆ ಮಾಡಿವೆ.

ಮೇ 27ರಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಈ ಮೂಲಕ ಈ ತಿಂಗಳಿನಲ್ಲಿ 14ನೇ ಬಾರಿ ಬೆಲೆ ಏರಿಕೆ ಕಂಡಿತ್ತು. ಮೇ 28ರಂದು ಬೆಲೆ ಸ್ಥಿರವಾಗಿದ್ದು, ಶನಿವಾರ ಬೆಲೆ ಏರಿಕೆ ಮಾಡಲಾಗಿದೆ. ಈ ಮೂಲಕ ಮೇ ತಿಂಗಳಿನಲ್ಲಿ ಹದಿನೈದನೇ ಬಾರಿ ಬೆಲೆ ಏರಿಕೆಯಾದಂತಾಗಿದೆ. ಲೀಟರ್ ಪೆಟ್ರೋಲ್‌ಗೆ 26 ಪೈಸೆ ಹಾಗೂ ಡೀಸೆಲ್‌ಗೆ 28 ಪೈಸೆ ಏರಿಕೆ ಮಾಡಲಾಗಿದೆ.

ಇಂದಿನ ಬೆಲೆ ಏರಿಕೆಯಿಂದ ತಿಂಗಳಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 3.44 ರೂ ಹಾಗೂ ಲೀಟರ್ ಡೀಸೆಲ್‌ಗೆ 4.16 ರೂ ಏರಿಕೆ ಕಂಡಂತಾಗಿದೆ.

Petrol Diesel Rates On May 29 Across Karnataka

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ ಶತಕ ದಾಟಿದೆ. 100.19 ರೂ ಇದ್ದು, ಡೀಸೆಲ್ ಬೆಲೆ 92.17 ರೂ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಮಾಹಿತಿ ನೀಡಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 67ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್ ಮೇಲೆ 13, ಡೀಸೆಲ್ ಮೇಲೆ 16 ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 68.36 ಯುಎಸ್ ಡಾಲರ್(1 USD=72.74ರೂ) ಪ್ರತಿ ಬ್ಯಾರೆಲ್‌ನಷ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Petrol Diesel Rates On May 29 Across Karnataka

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 97.07ರೂ - ಡೀಸೆಲ್ 89.99 ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಮೇ 29ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

ವಿನ್ಯಾಸ: ಭರತ್ ಎಚ್.ಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+