ಕರ್ನಾಟಕದಲ್ಲಿ ಜೂನ್ 19ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ?
ಬೆಂಗಳೂರು, ಜೂನ್ 19: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 19ರಂದು ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಶನಿವಾರ ಇಂಧನ ಬೆಲೆ ಯಾವುದೇ ಏರಿಕೆ, ಇಳಿಕೆ ಕಾಣದೇ ಸ್ಥಿರತೆ ಕಾಯ್ದುಕೊಂಡಿದೆ.
2021ರ ಮೇ ತಿಂಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16 ರೂಪಾಯಿ ಹಾಗೂ ಡೀಸೆಲ್ 18 ರೂಪಾಯಿ ಏರಿಕೆಯಾಗಿತ್ತು. ಜೂನ್ 19ರಂದು ಇಂಧನ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.82 ರೂ ಪ್ರತಿ ಲೀಟರ್, ಡೀಸೆಲ್ 94.84 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ದರ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 100.17 ರೂ ಹಾಗೂ ಡೀಸೆಲ್ ಬೆಲೆ 92.97 ರೂ ಆಗಿದೆ.

ರಾಜ್ಯದ ಬಾಗಲಕೋಟೆ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ವಿಜಯಪುರ ಜಿಲ್ಲೆ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ದಾವಣಗೆರೆ, ಹಾವೇರಿ, ಹಾಸನ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ತುಮಕೂರು, ಮಂಡ್ಯ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 100 ರೂ ದಾಟಿದೆ.
ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 19ರಂತೆ) ಸಚಿತ್ರ ಮಾಹಿತಿ ಇಲ್ಲಿದೆ.

ವಿನ್ಯಾಸ: ಭರತ್ ಎಚ್.ಸಿ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.












Click it and Unblock the Notifications