ಜುಲೈ 03ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

ಬೆಂಗಳೂರು, ಜುಲೈ 03: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 3ರಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಶನಿವಾರ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿರುವುದಾಗಿ ಘೋಷಿಸಿವೆ.

ಎರಡು ದಿನಗಳ ಅಂತರದ ನಂತರ ಶುಕ್ರವಾರ ಇಂಧನ ದರವನ್ನು ಏರಿಸಲಾಗಿತ್ತು. ಈ ಬೆಲೆ ಏರಿಕೆಯೊಂದಿಗೆ ನೂರು ರೂ ಗಡಿ ದಾಟಿದ ನಗರಗಳ ಪಟ್ಟಿಗೆ ಚೆನ್ನೈ ಕೂಡ ಸೇರಿಕೊಂಡಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 75.70 ಯುಎಸ್ ಡಾಲರ್(1 USD=74.70 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರೂ ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 109.70 ರೂ ನಷ್ಟಿದೆ, ಡೀಸೆಲ್ ಬೆಲೆ 101.77 ರೂ ಆಗಿದೆ.

Petrol, Diesel Rates Stable on July 03 Across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್- ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 104 ರೂ ದಾಟಿದ ಜಿಲ್ಲೆಗಳು: ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 102.48 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.54 ರೂಪಾಯಿಗೆ ಮುಟ್ಟಿದೆ. ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 104.42 ರೂಪಾಯಿ ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ದಾವಣಗೆರೆ, ಚಿತ್ರದುರ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಬೆಲೆ 104 ಪ್ಲಸ್ ಇದೆ. ಬಳ್ಳಾರಿ, ಹಾವೇರಿ, ಕೊಪ್ಪಳ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ 103, ಮಿಕ್ಕ ಜಿಲ್ಲೆಗಳಲ್ಲಿ ಪ್ರತಿ ಲೀಟರ್‌ಗೆ 102 ರೂ ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol, Diesel Rates Stable on July 03 Across Karnataka

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 03) ಸಚಿತ್ರ ಮಾಹಿತಿ ಇಲ್ಲಿದೆ.

ವಿನ್ಯಾಸ: ಭರತ್ ಎಚ್. ಸಿ.

Recommended Video

      ಸಿದ್ದರಾಮಯ್ಯ ಮುಂದೆ ನಡೀಲಿಲ್ಲ ಡಿಕೆಶಿ ಆಟ | Karnataka Congress Inside Politics | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+